Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ಸ್ಫೋಟಕ ಸಿಡಿದು ಐವರ ಸಾ*ವು!

Spread the love

ಹೈದರಾಬಾದ್, : ರಸ್ತೆ ಕಾಮಗಾರಿ ವೇಳೆ ಸ್ಫೋಟಕ ಸಾಧನ ಸಿಡಿದು ಐವರು ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಅನಂತಗಿರಿ ಮಂಡಲದ ಪಿನಕೋಟ ಗ್ರಾಮದಲ್ಲಿ ಘಾಟ್ ರಸ್ತೆಯ ವಿಸ್ತರಣೆಗಾಗಿ ಬಂಡೆಗಳನ್ನು ಸ್ಫೋಟಿಸುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಸ್ತೆ ವಿಸ್ತರಣೆ ಕಾಮಗಾರಿಗಾಗಿ ಜಿಲೆಟಿನ್ ಕಡ್ಡಿಗಳನ್ನು ಹೊಂದಿದ್ದ ವಿಶೇಷ ಸಾಧನವನ್ನು ಬಳಸಿ ಬಂಡೆಗಳನ್ನು ಸ್ಫೋಟಿಸಲಾಗುತ್ತಿತ್ತು. ಈ ವೇಳೆ ಸ್ಫೋಟಕ ಸಾಧನದಲ್ಲಿ ತಾಂತ್ರಿಕ ದೋಷ ಉಂಟಾಗಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ತೀವ್ರತೆಗೆ ಎರಡು ವಾಹನಗಳು ಸಂಪೂರ್ಣವಾಗಿ ನಾಶವಾಗಿವೆ.

ಈ ದುರಂತದಲ್ಲಿ ವಾಹನದ ಚಾಲಕ ಮತ್ತು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ವಾಹನದಲ್ಲಿ ಬರುತ್ತಿದ್ದ ಶಿಕ್ಷಕಿಯೊಬ್ಬರೂ ಸ್ಫೋಟಕ್ಕೆ ಬಲಿಯಾಗಿದ್ದಾರೆ. ಮೃತರಲ್ಲಿ ವಿಶಾಖಪಟ್ಟಣಂನ ಶಿಕ್ಷಕಿ ಸುನೀತಾ, ದೇವರಪಲ್ಲಿಯ ಕಾರ್ಮಿಕ ಮಣಿ, ಚಿದಿಕಾಡದ ಕಾರ್ಮಿಕ ನಾರಾಯಣರಾವ್ ಹಾಗೂ ಕಡಪದ ಪವನ್ ಕುಮಾರ್ ಅವರನ್ನು ಗುರುತಿಸಲಾಗಿದೆ. ಮೃತಪಟ್ಟ ಇನ್ನೊಬ್ಬರ ಗುರುತು ಇನ್ನಷ್ಟೇ ಲಭ್ಯವಾಗಬೇಕಿದೆ.

ಘಟನೆ ನಡೆದ ತಕ್ಷಣ ಸ್ಥಳೀಯ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಗೃಹ ಸಚಿವರ ಸೂಚನೆ

ಘಟನೆಗೆ ಆಂಧ್ರಪ್ರದೇಶದ ಗೃಹ ಸಚಿವೆ ವಂಗಲಪುಡಿ ಅನಿತಾ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಅವರು ಸಂತಾಪ ಸೂಚಿಸಿ ಸಂದೇಶ ಕಳುಹಿಸಿದ್ದು, ಅಲ್ಲೂರಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ವಿವರಗಳನ್ನು ಪಡೆದುಕೊಂಡಿದ್ದಾರೆ.ಈ ದುರಂತವನ್ನು ಅತ್ಯಂತ ನೋವಿನ ಘಟನೆ ಎಂದು ಬಣ್ಣಿಸಿರುವ ಸಚಿವೆ, ಗಾಯಾಳುಗಳಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ, ಸಂತ್ರಸ್ತ ಕುಟುಂಬಗಳ ನೆರವಿಗೆ ರಾಜ್ಯ ಸರ್ಕಾರ ನಿಲ್ಲಲಿದ್ದು, ಅಗತ್ಯ ಸಹಾಯ ಒದಗಿಸುವುದಾಗಿ ಭರವಸೆ ನೀಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *