ಕಬ್ಬು ಬೆಳೆಗಾರರಿಗೆ ಸಿಹಿಸುದ್ದಿ ಯಾವಾಗ? ‘ಜೇಬಿನಲ್ಲಿ ದುಡ್ಡಿದ್ದರೆ ತಾನೇ ಕೊಡಲು ಸಾಧ್ಯ’ ಎಂದ ಡಿ.ಕೆ. ಶಿವಕುಮಾರ್!

ಬೆಳಗಾವಿ: ಸಕ್ಕರೆ ದರ ಏರಿಕೆ ಆಗುವವರೆಗೆ ರೈತರಿಗೆ ನ್ಯಾಯ ಸಿಗುವುದು ಕಷ್ಟ. ಸಕ್ಕರೆ ಕಾರ್ಖಾನೆಗಳನ್ನು ಕೂಡಲೇ ಆರಂಭಿಸುವಂತೆ ಮಾಲೀಕರಿಗೆ ಸೂಚಿಸಲಾಗಿದೆ. ಸಕ್ಕರೆಯ ಬೆಲೆ ಹೆಚ್ಚಳವಾದರೆ ಅದರ ಆಧಾರದ ಮೇಲೆ ರೈತರಿಗೆ ಹಣ ನೀಡುವುದಾಗಿ ಕಾರ್ಖಾನೆ ಮಾಲೀಕರು ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದರು.

ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಈಗಲೇ ಸಿಹಿ ಸುದ್ದಿ ಕೊಡಿ ಎಂದರೆ ಹೇಗೆ? ಜೇಬಿನಲ್ಲಿ ದುಡ್ಡಿದ್ದರೆ ತಾನೇ ಕೊಡಲು ಸಾಧ್ಯ. ಸರ್ಕಾರದ ಬೊಕ್ಕಸದಲ್ಲಿ ಹಣವಿದ್ದರೆ ತಾನೇ ನೀಡಬಹುದು ಎಂದು ಹೇಳಿದರು.
ಬರಗಾಲದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಸುಮಾರು 9,000 ಕೋಟಿ ರೂ. ಹೊರೆ ಎದುರಾಗಿದೆ. ರೈತರು ಸರ್ಕಾರದ ಆರ್ಥಿಕ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ತಾಳ್ಮೆಯಿಂದ ಇರಬೇಕು ಎಂದು ಮನವಿ ಮಾಡಿದರುಕಬ್ಬು ಬೆಳೆಗಾರರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಹಾಗೂ ಇತರ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಹಾಲಿನ ದರ ಏರಿಕೆ ವಿಚಾರದಲ್ಲಿಯೂ ನಿರ್ಧಾರ ಕೈಗೊಳ್ಳಬೇಕಿದೆ ಎಂದು ತಿಳಿಸಿದರು.ಸಕ್ಕರೆ ದರ ಹೆಚ್ಚಳವಾಗುವವರೆಗೆ ರೈತರಿಗೆ ನ್ಯಾಯ ಸಿಗುವುದಿಲ್ಲ ಎಂಬ ಆತಂಕದ ನಡುವೆ, ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ 1,000 ಸಹಾಯಧನ ನೀಡಬೇಕೆಂಬ ರೈತರ ಬೇಡಿಕೆಗೆ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.