Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಾಗಡಿಯಲ್ಲಿ ನರಹಂತಕ ಚಿರತೆ ಸೆರೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ!

Spread the love

ರಾಮನಗರ: ಮಾಗಡಿ (Magadi) ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಭಯ ಹುಟ್ಟಿಸಿದ್ದ ನರಹಂತಕ ಚಿರತೆಯನ್ನು (Leopard) ಕೊನೆಗೂ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.

ಅರ್ಚಕ ಶಿವಸ್ವಾಮಿ (60) ಅವರನ್ನು ಕೊಂದಿದ್ದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಅ.12 ರಂದು ಅರ್ಚಕನ ಮೇಲೆ ಚಿರತೆ ದಾಳಿ ನಡೆಸಿ ಕೊಂದುಹಾಕಿತ್ತು‌. ಘಟನೆಯ ನಂತರ ಚಿರತೆಯು ಅಕ್ಕಪಕ್ಕದ ಗ್ರಾಮಗಳಲ್ಲೂ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿತ್ತು.ನರಹಂತಕ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಳೆದ ಒಂದು ವಾರದಿಂದ ಸತತ ಕಾರ್ಯಾಚರಣೆ ನಡೆಸಿದ್ದರು. ಗ್ರಾಮದ ಹೊರವಲಯದಲ್ಲಿ ಒಟ್ಟು ನಾಲ್ಕು ಬೋನ್‌ಗಳನ್ನು ಅಳವಡಿಸಲಾಗಿತ್ತು.

ಇಂದು (ಅ.29) 7ರಿಂದ 8 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ. ಚಿರತೆ ಬೋನಿಗೆ ಬಿದ್ದ ಸುದ್ದಿ ತಿಳಿಯುತ್ತಿದ್ದಂತೆಯೇ ಕಲ್ಲುದೇವನಹಳ್ಳಿ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದ್ದರು. ವಿಷಯ ತಿಳಿದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೆರೆಸಿಕ್ಕ ಚಿರತೆಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಸುರಕ್ಷಿತ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ. ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *