ಸುರತ್ಕಲ್: ಲಾರಿ-ಸ್ಕೂಟರ್ ಭೀಕರ ಢಿಕ್ಕಿ – ಶಿಪ್ಪಿಂಗ್ ಕಂಪನಿ ಚಾಲಕ ದಾರುಣ ಸಾ*ವು!

ಸುರತ್ಕಲ್: ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ಸವಾರರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಹಳೆಯಂಗಡಿ ಕದಿಕೆ ನಿವಾಸಿ ಇಮ್ಮಿಯಾಝ್ (39) ಮೃತಪಟ್ಟವರು ಎಂದು ತಿಳಿದು ಬಂದಿದೆ.
ಶಿಪ್ಪಿಂಗ್ ಕಂಪೆನಿಯೊಂದರಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಇಮ್ಮಿಯಾಝ್ ಇಂದು ಬೆಳಿಗ್ಗೆ ಪಣಂಬೂರಿನ ತನ್ನ ಲಾರಿಯ ಕಚೇರಿಗೆ ತೆರಳುತ್ತಿದ್ದ ವೇಳೆ ಬೈಕಂಪಾಡಿಯಲ್ಲಿ ಈ ಘಟನೆ ನಡೆಯಿತು ಎನ್ನಲಾಗಿದೆ.
ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಇಮ್ಮಿಯಾಝ್ ಅವರನ್ನು ಸಾರ್ವಜನಿಕರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ.
