Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾಸರಗೋಡು: ನಿಲ್ಲಿಸಿದ್ದ ಲಾರಿಗೆ ಬೈಕ್ ಭೀಕರ ಢಿಕ್ಕಿ – ತೆಯ್ಯಂ ನೋಡಲು ಹೊರಟಿದ್ದ ಇಬ್ಬರು ಯುವಕರು ದಾರುಣ ಸಾ*ವು!

Spread the love

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಪಡನ್ನಕ್ಕಾಡ್ ನೆಹರೂ ಕಾಲೇಜಿನ ಮುಂಭಾಗ ನಿಲ್ಲಿಸಿದ್ದ ಲಾರಿಗೆ ಬೈಕ್ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿದ್ದಾರೆ.
ನೀಲೇಶ್ವರ ಪಡಿಂಜಾಟಂ ಕೊಳುವಲ್ ನಿವಾಸಿಗಳಾದ ಅನುರಾಗ್ (22) ಮತ್ತು ಆನಂದಕೃಷ್ಣನ್ (24) ಮೃತಪಟ್ಟವರು. ಅನುರಾಗ್ ನೀಲೇಶ್ವರದ ವಸಂತ ಹೋಟೆಲ್‌ನಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದರು.
ನೀಲೇಶ್ವರದಿಂದ ಕಾಞಂಗಾಡ್ ತಿರುವು ಅರಯಿಲ್ ಭಗವತಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ತೆಯ್ಯಂ ವೀಕ್ಷಿಸಲು ಇಬ್ಬರೂ ಬೈಕ್‌ನಲ್ಲಿ ತೆರಳುತ್ತಿದ್ದರು. ರಾತ್ರಿ ಸುಮಾರು 9 ಗಂಟೆಗೆ ಪಡನ್ನಕ್ಕಾಡ್‌ನಲ್ಲಿ ಈ ಅಪಘಾತ ನಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ತಕ್ಷಣ ಕಾಞಂಗಾಡ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದು ಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *