ದೇವಾಲಯದ ಅರ್ಚಕರ ಬಗ್ಗೆ ವಿವಾದಾತ್ಮಕ ಹೇಳಿಕೆ: ನೇಹಾ ಬೋರಾ ಸಂಕಷ್ಟಕ್ಕೆ

ನವದೆಹಲಿ: ದೇವಾಲಯಗಳಲ್ಲಿ ಅರ್ಚಕರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾರೆ ಎಂದು ಹೇಳಿಕೆ ನೀಡಿದ್ದ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಸದಸ್ಯೆ ನೇಹಾ ಬೋರಾ (Neha Bora) ವಿರುದ್ಧ ದೆಹಲಿಯಲ್ಲಿ ಪೊಲೀಸ್ ದೂರು ದಾಖಲಾಗಿದೆ.
ದೆಹಲಿ ಹೈಕೋರ್ಟ್‌ನ ಮಹಿಳಾ ವಕೀಲೆ ಅಮಿತಾ ಸಚ್‌ದೇವ ಅವರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಎಸ್‌ಎಚ್‌ಒಗೆ ದೂರು ಸಲ್ಲಿಸಿದ್ದು ಹೇಳಿಕೆ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ನೇಹಾ ಬೋರಾ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ದೂರುದಾರರು, ಇದು ಧಾರ್ಮಿಕ ಸಮುದಾಯದ ಗೌರವಕ್ಕೆ ಧಕ್ಕೆ ಉಂಟುಮಾಡಬಹುದು ಮತ್ತು ಸಾಮಾಜಿಕ ಸಾಮರಸ್ಯದ ಮೇಲೆ ಪರಿಣಾಮ ಬೀರಬಹುದು ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ
ಈ ವಿಚಾರವಾಗಿ ಬಿಜೆಪಿ ಕೂಡ ನೇಹಾ ಬೋರಾ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗಳನ್ನು ಟೀಕಿಸಿದೆ. ಬಿಜೆಪಿ ತನ್ನ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಬೋರಾ ಅವರ ಹೇಳಿಕೆಯನ್ನು ಹಂಚಿಕೊಂಡು, ಅದನ್ನು ರಾಹುಲ್ ಗಾಂಧಿ ಅವರ ಹಿಂದಿನ ಹೇಳಿಕೆಗಳಿಗೆ ಹೋಲಿಸಿದೆ.
