Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರು-ಮಂಗಳೂರು-ಮಡಗಾಂವ್ ‘ವಂದೇ ಭಾರತ್’ ರೈಲಿಗೆ ನ. 13ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ!

Spread the love

ಉಡುಪಿ : ರಾಜ್ಯದ ರಾಜಧಾನಿ ಬೆಂಗಳೂರನ್ನು ಕರಾವಳಿಯ ಮಂಗಳೂರು, ಉಡುಪಿ, ಕಾರವಾರ ಮೂಲಕ ಗೋವಾದ ಮಡಗಾಂವ್‌ನೊಂದಿಗೆ ಸಂಪರ್ಕಿಸುವ ಬಹುನಿರೀಕ್ಷಿತ ‘ವಂದೇ ಭಾರತ್’ ಎಕ್ಸ್‌ಪ್ರೆಸ್‌ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿಯವರು ರೈಲಿನ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.ಆಧುನಿಕ ಸೌಲಭ್ಯಗಳನ್ನು ಹೊಂದಿರುವ ಈ ರೈಲು ಬೆಂಗಳೂರನ್ನು ಕರ್ನಾಟಕದ ಕರಾವಳಿ ತೀರದೊಂದಿಗೆ ನೇರವಾಗಿ ಬೆಸೆಯಲಿದೆ. ಕಳೆದೊಂದು ವರ್ಷದಿಂದ ಮಡಗಾಂವ್ ಹಾಗೂ ಮಂಗಳೂರು ಮಧ್ಯೆ ಸಂಚರಿಸುತ್ತಿದ್ದ ವಂದೇ ಭಾರತ್ ರೈಲಿನ ಸೇವೆಯನ್ನು ಇದೀಗ ಬೆಂಗಳೂರಿನವರೆಗೆ ವಿಸ್ತರಿಸಲಾಗಿದ್ದು, ಇನ್ಮುಂದೆ ಮಡಗಾಂವ್‌-ಬೆಂಗಳೂರು ನಡುವೆ ಪೂರ್ಣಪ್ರಮಾಣದಲ್ಲಿ ಸಂಚರಿಸಲಿದೆ.
ನವೆಂಬರ್ 13ರ ಶುಕ್ರವಾರ ಅಪರಾಹ್ನ 2 ಗಂಟೆಗೆ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನಿ ಮೋದಿ ಅವರು ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅದೇ ಸಮಯದಲ್ಲಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿಯೂ ಸರಳ ಸಮಾರಂಭ ಆಯೋಜಿಸಲಾಗಿದೆ. ಕರಾವಳಿಯಿಂದ ಬೆಂಗಳೂರಿನತ್ತ ಸಾಗುವ ರೈಲಿನ ಸಂಚಾರವನ್ನು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಮಂಗಳೂರು, ಉಡುಪಿ ಹಾಗೂ ಕಾರವಾರ ಕ್ಷೇತ್ರದ ಸಂಸದರ ಉಪಸ್ಥಿತಿಯಲ್ಲಿ ಸಾಂಕೇತಿಕವಾಗಿ ಉದ್ಘಾಟಿಸಲಿದ್ದಾರೆ.
ಉದ್ಘಾಟನೆಗೊಂಡ ಬಳಿಕ, ನವೆಂಬರ್ 15ರಿಂದ ಬೆಂಗಳೂರು ಮತ್ತು ಮಡಗಾಂವ್ ಎರಡೂ ಕಡೆಯಿಂದ ಈ ರೈಲಿನ ನಿಯಮಿತ ಪ್ರಯಾಣಿಕ ಸೇವೆಗಳು ಸಾರ್ವಜನಿಕರಿಗೆ ಲಭ್ಯವಾಗಲಿವೆ.


Spread the love
Share:

administrator

Leave a Reply

Your email address will not be published. Required fields are marked *