ನಾಲ್ಕು ತಿಂಗಳ ವೇತನ ಬಾಕಿ: ಮಂಗಳೂರಿನಲ್ಲಿ ಹೊರಗುತ್ತಿಗೆ ನೌಕರರ ಆಕ್ರೋಶ!

ಮಂಗಳೂರು:ಮಂಗಳೂರಿನ ಕ್ಲಾಕ್ ಟವರ್ ಬಳಿ ಸರಕಾರಿ ಪಾಲಿಟೆಕ್ನಿಕ್ ಹೊರಗುತ್ತಿಗೆ ನೌಕರರ ಸಂಘ (CITU) ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನಾ ಪ್ರದರ್ಶನ ನಡೆಯಿತು.

ಸರಕಾರಿ ಪಾಲಿಟೆಕ್ನಿಕ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿಯಿರುವ ಮಾರ್ಚ್, ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ವೇತನವನ್ನು ಕೂಡಲೇ ಪಾವತಿಸಬೇಕು. ನೌಕರರಿಗೆ ಅನ್ಯಾಯವೆಸಗಿರುವ ಬೆಂಗಳೂರಿನ ಆಬ್ಜೆಕ್ಟ್ ಟೆಕ್ನಾಲಜೀಸ್ ಸಂಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಅಲ್ಲದೆ, ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ, ಪಿಎಫ್ (PF), ಇಎಸ್‌ಐ (ESI) ಸೇರಿದಂತೆ ಅಗತ್ಯ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಬೇಕು ಹಾಗೂ ಹೊರಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ನೌಕರರನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನುದ್ದೇಶಿಸಿ CITU ಮುಖಂಡ ಸುನಿಲ್ ಕುಮಾರ್ ಬಜಾಲ್ ಮಾತನಾಡಿದರು.