Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆಹಾರ ಸುರಕ್ಷತಾ ಇಲಾಖೆ ದಾಳಿ: ಐಡಿಯಲ್ ಐಸ್ ಕ್ರೀಮ್‌ಗೆ ನೋಟಿಸ್, ಎಂ.ಆರ್ ಸ್ವೀಟ್ಸ್‌ನ ಆಹಾರ ಸಾಮಗ್ರಿ ಜಪ್ತಿ!

Spread the love

ಮಂಗಳೂರು:ನಗರ ಹೊರವಲಯದ ಕೊಲ್ಯದಲ್ಲಿರುವ ಐಡಿಯಲ್ ಐಸ್ ಕ್ರೀಮ್ ಸಂಸ್ಥೆಯ ಕೋಲ್ಡ್ ಸ್ಟೋರೇಜ್ ಘಟಕಕ್ಕೆ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು ಐಸ್ ಕ್ರೀಮ್ ಶೇಖರಿಸುವಾಗ ಪಾಲಿಸಬೇಕಾದ ಆಹಾರ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಕೋಲ್ಡ್ ಸ್ಟೋರೇಜ್ ಘಟಕದಲ್ಲಿ ನಿರ್ವಹಿಸಬೇಕಾದ ಸುರಕ್ಷಾ ಕ್ರಮಗಳನ್ನು ಪಾಲಿಸದಿರುವ ಬಗ್ಗೆ ನೋಟಿಸ್‌ ನೀಡಿದ್ದಾರೆ.

ಕೇರಳ ಗಡಿಭಾಗದ ತಲಪಾಡಿಯಲ್ಲಿ ಉಡುಪಿ ಕೆಫೆ ರೆಸ್ಟೋರೆಂಟಿನ ಕಿಚನ್ ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಹಾರ ಸುರಕ್ಷತಾ ನಿಯಮಗಳ ಬಗ್ಗೆ ಸೂಚನೆಗಳನ್ನು ನೀಡಿದ್ದಲ್ಲದೆ, ಕೆಲವು ಆಹಾರ ಮಾದರಿಗಳನ್ನು ಪ್ರಯೋಗ ಶಾಲೆಗೆ ಪರಿಶೀಲನೆಗಾಗಿ ಕಳಿಸಿಕೊಟ್ಟಿದ್ದಾರೆ. ತೊಕ್ಕೊಟ್ಟು ಬಳಿಯ ಸೇವಂತಿ ಗುಡ್ಡೆಯಲ್ಲಿರುವ ಎಂ.ಆರ್ ಸ್ವೀಟ್ಸ್ ಘಟಕಕ್ಕೆ ದಾಳಿ ನಡೆಸಿದ್ದು ನೈರ್ಮಲ್ಯ ಕಾಪಾಡಿಕೊಳ್ಳದ ಸ್ವೀಟ್ ಹಾಗೂ ಇನ್ನಿತರ ಆಹಾರ ವಸ್ತುಗಳನ್ನು ತಯಾರಿಸುತ್ತಿರುವುದು ಕಂಡುಬಂದಿದ್ದು ಆಹಾರ ಸಾಮಗ್ರಿಗಳನ್ನು ಮಾರಾಟ ಮಾಡದಂತೆ ತಡೆದು ಸೀಜ್ ಮಾಡಲಾಗಿದೆ.

ಆರೋಗ್ಯ ಸಚಿವ ಯು.ಟಿ ಖಾದರ್ ಸೂಚನೆಯ ಮೇರೆಗೆ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ಪ್ರವೀಣ್ ಕುಮಾರ್ ಸಿ.ಎಚ್‌ ನೇತೃತ್ವದಲ್ಲಿ ಐದು ತಂಡಗಳನ್ನು ರಚಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ತಯಾರಿಕಾ ಘಟಕಗಳು ಹಾಗೂ ಇನ್ನಿತರ ಆಹಾರ ಉದ್ಯಮಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಆಹಾರ ತಯಾರಿಕೆಯಲ್ಲಿ ನೈರ್ಮಲ್ಯ ಕಾಪಾಡಿಕೊಳ್ಳದಿರುವುದು ಪತ್ತೆಯಾದಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು ಎಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಕ್ರಮ ಕೈಗೊಳ್ಳುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *