Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳಗಿನ ಜಾವ ಪೊಲೀಸರ ದಾಳಿ: ಗೋವು ಕಳ್ಳತನಕ್ಕೆ ಯತ್ನಿಸುತ್ತಿದ್ದ ಇಬ್ಬರು ಅಂದರ್!

Spread the love

ಮಂಗಳೂರು:ನೆರೆಯ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಾಟ ಮಾಡಿ ವಧೆ ಮಾಡುವ ಉದ್ದೇಶದಿಂದ ಮೇಯಲು ಬಿಟ್ಟಿದ್ದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿ ಎರಡು ಗಂಡು ಕರುಗಳನ್ನು ರಕ್ಷಿಸಿ ಪ್ರಕರಣ ದಾಖಲಿಸಿಕೊಂಡ ಘಟನೆ ಬುಧವಾರ ನಡೆದಿದೆ.

ಆಲೆಟ್ಟಿ ಗ್ರಾಮದ ಎನಾವರ ನಿವಾಸಿ ಹಾಶಿರ್ ಎ. (28) ಹಾಗೂ ಆಲೆಟ್ಟಿ ಗ್ರಾಮದ ಅರಂಬೂರು ಪಿ.ಆ‌ರ್. ಕಾಂಪ್ಲೆಕ್ಸ್‌ ನಿವಾಸಿ ಸಂಶುದ್ದೀನ್ ಎಸ್.ಎಂ. (25) ಬಂಧಿತ ಆರೋಪಿಗಳಾಗಿದ್ದು ಪ್ರಕರಣದಲ್ಲಿ ಭಾಗಿಯಾಗಿರುವ ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿ ರಂಶಿ ಎಂಬಾತನ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬುಧವಾರ ಬೆಳಂಬೆಳಗ್ಗೆ 4:10ರ ಸುಮಾರಿಗೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದಲ್ಲಿ ಇಬ್ಬರು ವ್ಯಕ್ತಿಗಳು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಕಳ್ಳತನ ಮಾಡಿ ಕೇರಳಕ್ಕೆ ಸಾಗಿಸಲು ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಬೆಳಿಗ್ಗೆ 4:30ಕ್ಕೆ ಸ್ಥಳಕ್ಕೆ ದಾಳಿ ನಡೆಸಿದಾಗ, ಆರೋಪಿಗಳು ಎರಡು ಕರುಗಳ ಕುತ್ತಿಗೆಗೆ ಹಗ್ಗ ಬಿಗಿದು ಮೈದಾನದ ಕಂಬಕ್ಕೆ ಕಟ್ಟಿಹಾಕುತ್ತಿರುವುದು ಕಂಡುಬಂದಿದೆ. ಕೂಡಲೇ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೇರಳದ ರಂಶಿ ಎಂಬಾತನ ಸಹಕಾರದೊಂದಿಗೆ ಜಾನುವಾರುಗಳನ್ನು ಕಳ್ಳತನ ಮಾಡಿ ಕೇರಳಕ್ಕೆ ಸಾಗಿಸಿ, ಮಾಂಸಕ್ಕಾಗಿ ಅಕ್ರಮವಾಗಿ ವಧೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿರುವುದಾಗಿ ಆರೋಪಿಗಳು ಬಾಯ್ದಿಟ್ಟಿದ್ದಾರೆ.

ಪೊಲೀಸರು ಸ್ಥಳದಿಂದ ಎರಡು ಗಂಡು ಕರುಗಳನ್ನು ರಕ್ಷಿಸಿದ್ದು, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆ ಕಲಂ 7 ಮತ್ತು 15ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ.


Spread the love
Share:

administrator

Leave a Reply

Your email address will not be published. Required fields are marked *