ದಾಮೋದರ ಆರ್. ಸುವರ್ಣರ 102ನೇ ಜನ್ಮಜಯಂತಿ: 80 ಲಕ್ಷ ರೂ.ಗೂ ಅಧಿಕ ವಿದ್ಯಾರ್ಥಿವೇತನ ವಿತರಣೆ!

ಮಂಗಳೂರು : ದಾಮೋದರ ಆರ್. ಸುವರ್ಣ ಅವರ 102ನೇ ಜನ್ಮಜಯಂತಿ ಪ್ರಯುಕ್ತ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಸಮಾಜಸೇವಕ ದಿವಂಗತ ದಾಮೋದರ ಆರ್. ಸುವರ್ಣ ಅವರ 102ನೇ ಜನ್ಮಜಯಂತಿಯ ಅಂಗವಾಗಿ ನವೆಂಬರ್ 29ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿವೇತನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಲಿದೆ.
ಹಿಂದುಳಿದ ಸಮಾಜದ ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ದಾಮೋದರ ಆರ್. ಸುವರ್ಣ ಅವರು, ನಾರಾಯಣ ಗುರುಗಳ ತತ್ವಾದರ್ಶಗಳನ್ನು ಜೀವನದುದ್ದಕ್ಕೂ ಪಾಲಿಸಿ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಕುದ್ರೋಳಿಯಲ್ಲಿ ನಾರಾಯಣ ಗುರು ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಬೆಳಕಾಗಿದ್ದರು.
ಈ ಸಮಾರಂಭದಲ್ಲಿ ವೃತ್ತಿಪರ ಶಿಕ್ಷಣ ಪಡೆಯುತ್ತಿರುವ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ 80 ಲಕ್ಷ ರೂಪಾಯಿಗೂ ಅಧಿಕ ಮೊತ್ತದ ವಿದ್ಯಾರ್ಥಿವೇತನ ವಿತರಿಸಲಾಗುವುದು. ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದ ಮೂಲಕ ದಾಮೋದರ ಆರ್. ಸುವರ್ಣ ಅವರ ಸಮಾಜಮುಖಿ ಚಿಂತನೆ, ಶೈಕ್ಷಣಿಕ ಸೇವೆ ಹಾಗೂ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶ ಹೊಂದಲಾಗಿದೆ ಎಂದು ಸಂಘಟಕ ನವೀನ್ ಚಂದ್ರ ಸುವರ್ಣ ತಿಳಿಸಿದ್ದಾರೆ.