Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು: ಮಹಿಳೆ ಮೇಲೆ ಹಲ್ಲೆ ಹಾಗೂ ಅತ್ಯಾಚಾ*ರ ಪ್ರಕರಣ – ಆರೋಪಿ ಅನಿಲ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ₹54 ಸಾವಿರ ದಂಡ!

Spread the love

ಮಂಗಳೂರು:ಮಹಿಳೆ ಮೇಲೆ ಹಲ್ಲೆ, ಅತ್ಯಾಚಾರ ಪ್ರಕರಣ – ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, 54 ಸಾವಿರ ರೂ. ದಂಡ

ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಲ್ಲದೆ, ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 54 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

2021ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ನೆರೆಮನೆಯ ನಿವಾಸಿ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಎಸಗಿದ್ದಲ್ಲದೆ, ಜೀವ ಬೆದರಿಕೆ ಹಾಕಿದ್ದ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/2021ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದು ಪೊಲೀಸ್ ಉಪನಿರೀಕ್ಷಕರಾಗಿದ್ದ ಪ್ರಸನ್ನ ಎಂ.ಎಸ್. ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ.ಡಿ. ನಾಗರಾಜ್ ಅವರು ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 54 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.


Spread the love
Share:

administrator

Leave a Reply

Your email address will not be published. Required fields are marked *