Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

KPSC ನೇಮಕಾತಿ ಹಗರಣದ ಕಿಂಗ್‌ಪಿನ್ ಕನ್ನಾಳೆ ಜೈಲಿನಲ್ಲೂ ಕಳ್ಳಾಟ: ಸುಳ್ಳು ಚಿಕಿತ್ಸೆ ನೆಪ ಬಯಲು!

Spread the love

ಬೆಂಗಳೂರು: ಕೆಪಿಎಸ್‌ಸಿ (KPSC) ನೇಮಕಾತಿ ಹಗರಣದ ಕಿಂಗ್‌ಪಿನ್ ಬಸವರಾಜ್ ಕನ್ನಾಳೆ (Basavaraj Kannale) ತನ್ನ ಕಳ್ಳಾಟವನ್ನು ಜೈಲಿನಲ್ಲಿಯೂ ಮುಂದುವರಿಸಿದ್ದಾನೆ ಎನ್ನೋದು ಬಯಲಾಗಿದೆ.

ಈ ಹಿಂದೆ ಕನ್ನಾಳೆ ತೀವ್ರವಾಗಿ ಮಂಡಿ ನೋವಿದೆ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಅದರ ಬೆನ್ನಲ್ಲೇ ಕೋರ್ಟ್ 48 ಗಂಟೆಯಲ್ಲಿ ಚಿಕಿತ್ಸೆಗೆ ಕೊಡಿಸಿ ಎಂದು ಸೂಚಿಸಿತ್ತು. ಅದರಂತೆ ಕನ್ನಾಳೆ ಚಿಕಿತ್ಸೆ ಪಡೆಯುವ ನೆಪದಲ್ಲಿ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದ

ಆನಂತರ ಜೈಲಧಿಕಾರಿಗಳು ಸುಳ್ಳು ಮಾಹಿತಿ ನೀಡಿ, ಕನ್ನಾಳೆ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿ ನೀಡಿದ್ದರು. ಅದರ ಬೆನ್ನಲ್ಲೇ ಡಿಜಿಪಿ ಅಲೋಕ್ ಕುಮಾರ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಸೂಚಿಸಿದ್ದರು.ಸದ್ಯ ಜೈಲಧಿಕಾರಿಗಳು ವಿಕ್ಟೋರಿಯಾ ಆಸ್ಪತ್ರೆಯಿಂದ ಕನ್ನಾಳೆಯನ್ನು ಬಿಡುಗಡೆ ಮಾಡಿಸಿದ್ದು, ಮತ್ತೆ ಪರಪ್ಪನ ಅಗ್ರಹಾರ ಜೈಲಿಗಟ್ಟಿದ್ದಾರೆ. ಇತ್ತ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿ.4ಕ್ಕೆ ಮುಂದೂಡಿಕೆ ಮಾಡಿದೆ


Spread the love
Share:

administrator

Leave a Reply

Your email address will not be published. Required fields are marked *