ಮಂಗಳೂರು: ಜಾಗತಿಕ ತಂತ್ರಜ್ಞಾನ ಕೇಂದ್ರವಾಗಲಿದೆ ಮಂಗಳೂರು – ₹11 ಸಾವಿರ ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರ ಬದ್ಧ ಎಂದ ಸಚಿವ ಪ್ರಿಯಾಂಕ್ ಖರ್ಗೆ!

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ದಕ್ಷಿಣ ಕನ್ನಡದ ಆರ್ಥಿಕ ಚೈತನ್ಯಕ್ಕೆ ಸರ್ಕಾರದ ಒತ್ತು
ಮಂಗಳೂರನ್ನು ಜಾಗತಿಕ ತಂತ್ರಜ್ಞಾನ ಕೇಂದ್ರವನ್ನಾಗಿಸುವ ಗುರಿ
ದಕ್ಷಿಣ ಕನ್ನಡ ಜಿಲ್ಲೆಯ ಆರ್ಥಿಕ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ
ಮಂಗಳೂರಿನಲ್ಲಿ ಜಾಗತಿಕ ಮಟ್ಟದ ಉದ್ಯಮ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ
‘ಬಿಯಾಂಡ್ ಬೆಂಗಳೂರು’ ಕಾರ್ಯಕ್ರಮದಡಿ ಗ್ಲೋಬಲ್ ಕೆಪಬಿಲಿಟಿ ಸೆಂಟರ್ ಉದ್ಘಾಟನೆಗೆ ಬಂದಿದ್ದ ಸಂದರ್ಭದಲ್ಲಿ ಕೈಗೊಂಡ ಪ್ರಯತ್ನಗಳಿಗೆ ಉತ್ತಮ ಫಲಿತಾಂಶ ಸಿಗುತ್ತಿದೆ
ಡೆನ್ಮಾರ್ಕ್ ಮೂಲದ ಸಂಸ್ಥೆಗಳು ಸೇರಿದಂತೆ ಹಲವು ಕಂಪನಿಗಳು ಮಂಗಳೂರಿಗೆ ಬಂದಿವೆ
ದೊಡ್ಡ ಕಂಪನಿಯಾದ ಡೆಲಾಯ್ಟ್ ಕೂಡ ಮಂಗಳೂರಿನಲ್ಲಿ ಕಾರ್ಯಾರಂಭ ಮಾಡಿದ್ದು,
ಈಗಾಗಲೇ ಸುಮಾರು 700 ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿದೆ
ಉದ್ಯೋಗಿಗಳ ಸಂಖ್ಯೆ ಮುಂದಿನ ದಿನಗಳಲ್ಲಿ 1,000ಕ್ಕೆ ತಲುಪುವ ಸಾಧ್ಯತೆಯಿದೆ.