Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು: ಬ್ಯಾನರ್ ತೆರವು ವಿಚಾರ – ಪಾಲಿಕೆ ಅಧಿಕಾರಿಗಳ ವಿರುದ್ಧ ಯುವ ಕಾಂಗ್ರೆಸ್ ನಾಯಕ ಗಿರೀಶ್ ಆಳ್ವ ಆಕ್ರೋಶ!

Spread the love

ಬ್ಯಾನರ್ ತೆರವು ವಿಚಾರ: ಅಧಿಕಾರಿಗಳ ವಿರುದ್ಧ ಯುವ ಕಾಂಗ್ರೆಸ್ ನಾಯಕ ಗಿರೀಶ್ ಆಳ್ವ ಆಕ್ರೋಶ

ಇಂದು ಯುವ ಕಾಂಗ್ರೆಸ್ ನಾಯಕ ಗಿರೀಶ್ ಆಳ್ವ ಅವರು ಕುಟುಂಬ ಸಮೇತರಾಗಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಬೋಂದೆಲ್–ಪಚ್ಚನಾಡಿ ಪ್ರದೇಶದಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಂಡ ವಾಮಂಜೂರು–ಬೋಂದೆಲ್ ಕಾಂಕ್ರೀಟ್ ರಸ್ತೆಗೆ ಅನುದಾನ ಬಿಡುಗಡೆಗೊಳಿಸಿದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿ ಅಳವಡಿಸಲಾಗಿದ್ದ ಬ್ಯಾನರ್ ಅನ್ನು ಮಂಗಳೂರು ಮಹಾನಗರ ಪಾಲಿಕೆಯ ಸುಮಾರು 15 ಮಂದಿ ಅಧಿಕಾರಿಗಳು ತೆರವುಗೊಳಿಸುತ್ತಿರುವುದನ್ನು ಗಮನಿಸಿದರು.

ತಕ್ಷಣವೇ ಸ್ಥಳಕ್ಕೆ ತೆರಳಿದ ಗಿರೀಶ್ ಆಳ್ವ ಅವರು ಏಕಾಂಗಿಯಾಗಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು, ಬ್ಯಾನರ್ ತೆರವು ವಿಚಾರದಲ್ಲಿ ತಾರತಮ್ಯ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಇತರ ಪಕ್ಷಗಳ ನಾಯಕರು ಅಳವಡಿಸಿರುವ ಬ್ಯಾನರ್‌ಗಳನ್ನು ಮೊದಲು ತೆರವುಗೊಳಿಸಿ, ನಂತರ ಇಂತಹ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆಗ್ರಹಿಸಿದರು. ಬ್ಯಾನರ್ ವಿಚಾರದಲ್ಲಿ ರಾಜಕೀಯ ಮಾಡದೆ, ಯಾವುದೇ ಪಕ್ಷದವರಾಗಿರಲಿ ಎಲ್ಲರಿಗೂ ಒಂದೇ ರೀತಿಯ ನಿಯಮಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಈ ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪಚ್ಚನಾಡಿ ವಾರ್ಡ್‌ನ ಹಲವು ಕಾಂಗ್ರೆಸ್ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಗಿರೀಶ್ ಆಳ್ವ ಅವರಿಗೆ ಬೆಂಬಲವಾಗಿ ನಿಂತರು.

ಅಭಿವೃದ್ಧಿ ಕಾರ್ಯಗಳಿಗೆ ಅಭಿನಂದನೆ ಸಲ್ಲಿಸುವ ಬ್ಯಾನರ್‌ಗಳ ವಿಚಾರದಲ್ಲಿ ರಾಜಕೀಯ ತಾರತಮ್ಯ ಸಲ್ಲದು. ಕಾನೂನು ಎಲ್ಲರಿಗೂ ಸಮಾನವಾಗಿರಬೇಕು ಎಂಬುದು ನಮ್ಮ ಆಗ್ರಹ.


Spread the love
Share:

administrator

Leave a Reply

Your email address will not be published. Required fields are marked *