ಪ್ರತಿಭಟನೆಯ ಹಕ್ಕು ಕಸಿಯುವ ಪ್ರಯತ್ನ: ಪೊಲೀಸರ ವಿರುದ್ಧ ಎಸ್ಡಿಪಿಐ ಆಕ್ರೋಶ

ಮಂಗಳೂರು: ಟೋಲ್ ಗೇಟ್ ವಿರುದ್ಧ ಧ್ವನಿ ಎತ್ತುತ್ತಿರುವ ಎಸ್ಡಿಪಿಐ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುವ ಮೂಲಕ ಪ್ರತಿಭಟನೆಯ ಹಕ್ಕನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ವಾರದ ಹಿಂದೆ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದ ಸಂದರ್ಭದಲ್ಲೂ ಬಂಟ್ವಾಳ ನಗರ ಠಾಣೆಯ ಇನ್ಸ್ಪೆಕ್ಟರ್ ಪ್ರಕರಣ ದಾಖಲಿಸಿದ್ದಾರೆ. ಅಲ್ಲಿ ಧ್ವನಿವರ್ಧಕ ಬಳಸಿರಲಿಲ್ಲ, ಹೆಚ್ಚಿನ ಸಂಖ್ಯೆಯಲ್ಲಿ ಜನರೂ ಸೇರಿರಲಿಲ್ಲ. ಆದರೂ ಪ್ರಕರಣ ದಾಖಲಿಸಿರುವುದು ಪೊಲೀಸರ ದ್ವಂದ್ವ ನೀತಿಗೆ ಸಾಕ್ಷಿ ಎಂದು ಆರೋಪಿಸಿದರು.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಹೇಳಿದ್ದರೂ, ಪ್ರತಿಭಟನಾಕಾರರನ್ನು ಹೊರಗೆ ಕಳುಹಿಸಿ ಅಧಿಕಾರಿಗಳನ್ನು ಚೇಂಬರ್ಗೆ ಕರೆಸಿಕೊಂಡ ಬಳಿಕ ಪ್ರಕರಣ ದಾಖಲಿಸಲಾಗಿದೆ. ಪ್ರತಿಭಟನೆ ನಡೆಸಲು ಹೆದ್ದಾರಿ ಪ್ರಾಧಿಕಾರದಿಂದ ಎನ್ಒಸಿ ಪಡೆಯಬೇಕು ಎಂಬ ನಿಯಮ ಎಲ್ಲಿದೆ? ಸಾರ್ವಜನಿಕರ ಪ್ರತಿಭಟನೆಯ ಹಕ್ಕನ್ನು ಪೊಲೀಸರು ಯಾವ ಅಧಿಕಾರದಡಿ ನಿರ್ಬಂಧಿಸುತ್ತಿದ್ದಾರೆ? ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಎಂದು ಎಸ್ಡಿಪಿಐ ಮಂಗಳೂರು ಗ್ರಾಮೀಣ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಆಕ್ರೋಶ ವ್ಯಕ್ತಪಡಿಸಿದರು