Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಫ್ಘಾನಿಸ್ತಾನದಲ್ಲಿ ಭೀಕರ ಸ್ಫೋಟ: 6 ವಿದ್ಯಾರ್ಥಿಗಳು ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ!

Spread the love

ಕಾಬೂಲ್: ಅಫ್ಘಾನಿಸ್ತಾನದ (Afghanistan) ಕುನಾರ್ ಪ್ರಾಂತ್ಯದ ಶಾಲೆಯ (School) ಬಳಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಆರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಸುಮಾರು 100 ಮಂದಿ ಗಾಯಗೊಂಡಿದ್ದಾರೆ. ಗಣಿಗಾರಿಕೆ ಕಾರ್ಮಿಕರು ಡೈನಮೈಟ್ ಸಂಗ್ರಹಿಸಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಎಂದು ವರದಿಯಾಗಿದೆ.ಸ್ಥಳೀಯ ಕಾಲಮಾನ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಅಧಿಕಾರಿಗಳು ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಸಾವುನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಶಾಲೆ ಬಳಿ ಡೈನಮೈಟ್ ಸಂಗ್ರಹ
ಮಾಹಿತಿ ಮತ್ತು ಸಂಸ್ಕೃತಿ ನಿರ್ದೇಶಕ ಮಾವ್ಲಾವಿ ಸಮಿ-ಉಲ್-ಹಕ್ ಈ ಬಗ್ಗೆ ಮಾತನಾಡಿ, ಮಧ್ಯಮ ಶಾಲೆಯ ಪಕ್ಕದಲ್ಲಿರುವ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಈ ಮನೆ ಗಣಿಗಾರಿಕೆ ಕಾರ್ಯಾಚರಣೆಯಲ್ಲಿ ತೊಡಗಿರುವ ಕಾರ್ಮಿಕರಿಗೆ ಸೇರಿದೆ. ಅವರು ಮನೆಯಲ್ಲಿ ಡೈನಮೈಟ್ ಸಂಗ್ರಹಿಸಿದ್ದರು ಎಂದು ತಿಳಿಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.ಗಡಿಯಲ್ಲಿ ತನಿಖೆ: ಕುನಾರ್ ಪ್ರಾಂತ್ಯಕ್ಕೆ ತನಿಖಾ ತಂಡಗಳು ತಲುಪಿವೆ. ಕುನಾರ್ ಪೂರ್ವ ಅಫ್ಘಾನಿಸ್ತಾನದಲ್ಲಿದ್ದು, ಪಾಕಿಸ್ತಾನದೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಗಡಿ ಭಾಗದಲ್ಲಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *