ಎ.15, 16ರಂದು CET ಪರೀಕ್ಷೆ ಹಿನ್ನೆಲೆ: 8 ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಮಂಗಳೂರು: ದ. ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯ 8 ಪರೀಕ್ಷಾ ಕೇಂದ್ರಗಳಲ್ಲಿ ಎ.16 ಮತ್ತು 17ರಂದು ಸಿಇಟಿ ಪರೀಕ್ಷೆ ನಡೆಯಲಿದೆ.
ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಯನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು 8 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.