ನಾಗಪುರ: ಅಲ್ಯುಮಿನಿಯಂ ಫಾಯಿಲ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ – ಐವರ ದುರ್ಮರಣ

ಮಹಾರಾಷ್ಟ್ರ: ಅಲ್ಯುಮಿನಿಯಂ ಫಾಯಿಲ್ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಐವರು ಮೃತಪಟ್ಟಿರುವ ಘಟನೆ ನಾಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೂ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ರಾತ್ರಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಇದ್ದಕ್ಕಿಂದತೆಯೇ ಭಾರೀ ಸ್ಫೋಟ ಸಂಭವಿಸಿ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿತ್ತು. ಮೂವರು ಸ್ಥಳದಲ್ಲಿಯೇ ಮೃತಪಟ್ಟರೆ ಇಬ್ಬರು ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದರು. ಗಾಯಗೊಂಡಿರುವವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅವಘಡಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ.
