Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

CET ಪರೀಕ್ಷೆ ನಾಳೆಯಿಂದ ಆರಂಭ: ಮೊಬೈಲ್, ವಾಚ್, ಕ್ಯಾಲ್ಕುಲೇಟರ್ ನಿಷೇಧ

Spread the love

ಬೆಂಗಳೂರು : ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಏಪ್ರಿಲ್ 16 ಮತ್ತು 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ಸೂಕ್ಷ್ಮವಾಗಿ, ಪಾರದರ್ಶಕವಾಗಿ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ.

ಏಪ್ರಿಲ್ 16ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ಹಾಗೂ ಏಪ್ರಿಲ್ 17ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 11.50 ರವರೆಗೆ ಗಣಿತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮೊದಲು ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇರುತ್ತದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡ್ಯೊಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆ ಬೇಕಾಗಿರುತ್ತದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವುದು ಮತ್ತು ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಜಿಲ್ಲಾಧಿಕಾರಿಗಳಿಂದ ಘೋಷಿಸುವುದು.

ವಿಜ್ಞಾನ ವಿಷಯವನ್ನು ಬೋಧಿಸುವ ಉಪನ್ಯಾಸಕರು, ಶಿಕ್ಷಕರು ಹಾಗೂ ಸಂಬಂಧಿಕರ, ಸ್ವಂತ ಮಕ್ಕಳು ಈ ಪರೀಕ್ಷೆಗೆ ಹಾಜರಾಗುತ್ತಿದ್ದರೆ ಅಂತಹ ಉಪನ್ಯಾಸಕರು, ಶಿಕ್ಷಕರನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸುವಂತೆ ಇಲ್ಲ. ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನುಗಳನ್ನು ತರುವುದು ಹಾಗೂ ಕೈ ಗಡಿಯಾರವನ್ನು ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಉಪನ್ಯಾಸಕರು, ಕಚೇರಿ ಸಿಬ್ಬಂದಿಯವರು ಪರೀಕ್ಷೆ ನಡೆಯುವ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ತರುವುದುನ್ನು ಹಾಗೂ ಕೈ ಗಡಿಯಾರ ಧರಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಮುಖ್ಯ ಅಧೀಕ್ಷಕರು ಬೇಸಿಕ್ ಸೆಟ್ ಉಪಯೋಗಿಸಲು ಅವಕಾಶ ನೀಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ತೆರೆಯುವಾಗ ಹಾಗೂ ಉತ್ತರ ಪತ್ರಿಕೆಗಳನ್ನು ಬಂಡಲ್ ಮಾಡುವಾಗ ಸಿಸಿಟಿವಿ ವೀಕ್ಷಣೆಯಡಿಯಲ್ಲಿ ಕಾರ್ಯನಿರ್ವಹಿಸುವುದು ಮತ್ತು ಎಲ್ಲ ಕೊಠಡಿಗಳಿಗೆ ಸಿಸಿಟಿವಿ ಅಳವಡಿಸಬೇಕು ಎಂದು ಸೂಚನೆ ನೀಡಲಾಗಿದೆ.

ಕೆಸಿಇಟಿ ಡ್ರೆಸ್ ಕೋಡ್ 2025:

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಕೃತ ಅಧಿಸೂಚನೆಯಲ್ಲಿ ಕೆಸಿಇಟಿ ಡ್ರೆಸ್ ಕೋಡ್ ಅನ್ನು ಉಲ್ಲೇಖಿಸಿಲ್ಲ. ಆದಾಗ್ಯೂ, ಅಭ್ಯರ್ಥಿಗಳು ದೊಡ್ಡ ಗುಂಡಿಗಳು, ಉಂಗುರಗಳು, ಕಿವಿಯೋಲೆಗಳು, ದಪ್ಪ ಅಂಗಾಲುಗಳನ್ನು ಹೊಂದಿರುವ ಬೂಟುಗಳು ಮತ್ತು ಇತರ ಬಟ್ಟೆಗಳನ್ನು ಧರಿಸುವುದನ್ನು ತಪ್ಪಿಸಲು ಸೂಚಿಸಲಾಗಿದೆ. ಡ್ರೆಸ್ ಕೋಡ್ ಜೊತೆಗೆ, ಅರ್ಜಿದಾರರು ಕೆಸಿಇಟಿ ಪರೀಕ್ಷಾ ಕೇಂದ್ರದ ಒಳಗೆ ಯಾವುದೇ ನಿರ್ಬಂಧಿತ ವಸ್ತುವನ್ನು ಒಯ್ಯದಂತೆ ಸೂಚಿಸಲಾಗಿದೆ. ಕ್ಯಾಲ್ಕುಲೇಟರ್, ವಾಚ್, ವ್ಯಾಲೆಟ್ ಅಥವಾ ಇತರ ಯಾವುದೇ ನಿರ್ಬಂಧಿತ ವಸ್ತುವನ್ನು ಹೊಂದಿರುವ ಯಾವುದೇ ಅಭ್ಯರ್ಥಿಗಳಿಗೆ ಕೆಸಿಇಟಿ 2024 ಪರೀಕ್ಷೆಯಲ್ಲಿ ಕುಳಿತುಕೊಳ್ಳಲು ಅವಕಾಶವಿರುವುದಿಲ್ಲ.

ಅರ್ಜಿದಾರರು ಪರೀಕ್ಷೆ ಪ್ರಾರಂಭವಾಗುವ ಕನಿಷ್ಠ 25 ನಿಮಿಷಗಳ ಮೊದಲು ಪರೀಕ್ಷಾ ಕೊಠಡಿಯನ್ನು ತಲುಪಬೇಕು.
ಕೆಸಿಇಟಿ 2025 ಪರೀಕ್ಷಾ ಕೇಂದ್ರದಲ್ಲಿ ಯಾವುದೇ ನಿರ್ಬಂಧಿತ ವಸ್ತುವನ್ನು ಒಯ್ಯಬೇಡಿ.
ಕೆಸಿಇಟಿ ಹಾಲ್ ಟಿಕೆಟ್ ನಲ್ಲಿ ಉಲ್ಲೇಖಿಸಿರುವ ಎಲ್ಲಾ ಪರೀಕ್ಷಾ ದಿನದ ಸೂಚನೆಗಳನ್ನು ಅನುಸರಿಸಿ.
ಪರೀಕ್ಷೆ ಮುಗಿಯುವ ಮೊದಲು ಪರೀಕ್ಷಾ ಕೊಠಡಿಯಿಂದ ಹೊರಹೋಗಬೇಡಿ.


Spread the love
Share:

administrator

Leave a Reply

Your email address will not be published. Required fields are marked *