Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವೃದ್ಧ ದಂಪತಿ ಆತ್ಮಹತ್ಯೆ ಪ್ರಕರಣ:ಪ್ರಮುಖ ಆರೋಪಿ ಬಂಧನ

Spread the love

ಬೆಳಗಾವಿ: ಸೈಬರ್ ವಂಚಕರ ಕಾಟ ತಾಳಲಾರದೇ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ವೃದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.

ಗುಜರಾತ್‌ನ ಸೂರತ್‌ನ ನಿವಾಸಿ ಚಿರಾಗ್ ಜೀವರಾಜಬಾಯ್ ಲಕ್ಕಡ್ ಬಂಧಿತ ಆರೋಪಿ.ಆರೋಪಿಯ ವಿರುದ್ಧ ಅಪರಾಧ ಸಂಖ್ಯೆ 32/2025 ಕಲಂ 66(ಡಿ) ಐಟಿ ಕಾಯ್ದೆ ಮತ್ತು ಕಲಂ 108, 308(2), 319(2), 03(5) ಬಿಎನ್‌ಎಸ್ ಅಡಿ ಖಾನಾಪುರ ತಾಲೂಕಿನ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೀಡಿ ಗ್ರಾಮದ ಕ್ರಿಶ್ಚಿಯನ್ ಓಣಿಯ ನಿವಾಸಿಗಳಾಗಿದ್ದ ನಿವೃತ್ತ ರೈಲ್ವೆ ಉದ್ಯೋಗಿ ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ನಜರತ್ (78) ಅವರು ಮಾರ್ಚ್ 27ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಪ್ಲೇವಿಯಾ ನಿದ್ರೆ ಮಾತ್ರೆ ಸೇವಿಸಿ ಮೃತಪಟ್ಟಿದ್ದರೆ, ಪತಿ ಚಾಕುವಿನಿಂದ ತಮ್ಮ ಕುತ್ತಿಗೆಗೆ ಚುಚ್ಚಿಕೊಂಡು, ಮನೆಯ ಹಿಂದಿನ ನೀರಿನ ತೊಟ್ಟಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದಂಪತಿಯ ಆತ್ಮಹತ್ಯೆಯ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.

ಆತ್ಮಹತ್ಯೆಗೂ ಮುನ್ನ ಡಿಯಾಗೋ ಡೆತ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ದೆಹಲಿಯಲ್ಲಿ ಉನ್ನತ ಹುದ್ದೆಯಲ್ಲಿರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬರು ನಮಗೆ ಪದೇ ಪದೆ ಬೆದರಿಕೆ ಹಾಕಿದ್ದಾರೆ. ನನ್ನ ಸಿಮ್ ಕಾರ್ಡ್ ದುರ್ಬಳಕೆ ಮಾಡಿಕೊಂಡಿದ್ದಾರೆ. ಅನಿಲ್ ಯಾದವ್ ಎಂಬ ವ್ಯಕ್ತಿ ಕರೆ ಮಾಡಿ, ‘ನಿಮ್ಮ ನಂಬರಿನಿಂದ ನನಗೆ ಬೆತ್ತಲೆ ಚಿತ್ರಗಳು, ಅಶ್ಲೀಲ ಸಂದೇಶಗಳು ರವಾನೆಯಾಗಿವೆ. ನಿಮ್ಮ ವಿರುದ್ಧ ಠಾಣೆಗೆ ದೂರು ನೀಡಿದ್ದೇನೆ ಎಂದು ಬೆದರಿಸುತ್ತಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ.ಇದರಿಂದ ಹೆದರಿದ ಡಿಯಾಗೋ 50 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಸೈಬರ್ ವಂಚಕರ ಖಾತೆಗಳಿಗೆ ವರ್ಗಾಯಿಸಿದ್ದರು. ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳು ಮತ್ತಷ್ಟು ಹಣ ನೀಡುವಂತೆ ಪೀಡಿಸಿದ್ದರು.

ಹೆಚ್ಚಿನ ಹಣ ನೀಡಲು ಸಾಧ್ಯವಾಗದ ಹಿನ್ನೆಲೆ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಡಿಯಾಗೋ ಅವರ ಎಸ್‌ಬಿಐ ಖಾತೆಯಿಂದ ಬಾಲಾಜಿ ಇಂಡಸ್ಟ್ರೀಸ್ ಹೆಸರಿನಲ್ಲಿ ಐಡಿಎಫ್‌ಸಿ ಬ್ಯಾಂಕ್ ಖಾತೆಗೆ ಆನ್‌ಲೈನ್ ಮೂಲಕ 6.10 ಲಕ್ಷ ರೂ. ವರ್ಗಾಯಿಸಿಕೊಳ್ಳಲಾಗಿತ್ತು. ಈ ಖಾತೆಗೆ ಲಿಂಕ್ ಇದ್ದ ಮೊಬೈಲ್ ಸಂಖ್ಯೆಯನ್ನು ಬಳಸಿ ಹಣವನ್ನು ಆರೋಪಿ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದ. ಮೊಬೈಲ್ ಸಂಖ್ಯೆ ಪತ್ತೆ ಹಚ್ಚಿದ ಪೊಲೀಸರು ಮುಖ್ಯ ಆರೋಪಿಯನ್ನು ಇದೀಗ ಬಂಧಿಸಿದ್ದಾರೆ.ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೃತ್ಯಕ್ಕೆ ಬಳಸಿದ 2 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *