Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕರ್ನಾಟಕದಲ್ಲಿ ದ್ವೇಷ ಭಾಷಣಗಳಿಗೆ ಬ್ರೇಕ್ ನೀಡಲು ಹೊಸ ಕಾನೂನಿನ ಸಿದ್ಧತೆ, ಏನೀ ಹೊಸ ಕಾನೂನು?

Spread the love

ರಾಜ್ಯ ಸರ್ಕಾರ ಮಹತ್ವದ ಮಸೂದೆಯೊಂದನ್ನು ತರಲು ಸಿದ್ಧತೆ ನಡೆಸುತ್ತಿದ್ದು, ಬಜೆಟ್ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸುವ ಸಾಧ್ಯತೆ ಇದೆ. ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ ವಿಧೇಯಕ 2025 ಕರಡನ್ನು ಕಾನೂನು ಇಲಾಖೆ ಸಿದ್ಧಪಡಿಸಿದೆ. ಜಾತಿ, ಧರ್ಮ ಆಧರಿಸಿ ದ್ವೇಷ ಭಾಷಣ ಮಾಡಿದರೆ ಜೈಲು ಶಿಕ್ಷೆ ಗ್ಯಾರಂಟಿ. ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಭಾಷೆ, ಅಂಗವೈಕಲ್ಯ ಬುಡಕಟ್ಟುವಿನ ಕುರಿತು ದ್ವೇಷ ಭಾಷಣ ಮಾಡುವಂತಿಲ್ಲ ಎಂಬುದು ಬಿಲ್‌ ಕರಡಿನಲ್ಲಿದ್ದು, ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕಾರ ಆಗುತ್ತಾ..?

ಭಾಷೆ, ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ ವಿಚಾರವಾಗಿ ದ್ವೇಷ ಭಾಷಣ ಮಾಡುವಂತಿಲ್ಲ.

ಯಾವುದೇ ವ್ಯಕ್ತಿಗೆ ಹಾನಿ ಮಾಡುವ, ದ್ವೇಷ ಉತ್ತೇಜಿಸುವ, ಅದನ್ನು ಪ್ರಚಾರ ಮಾಡುವ ವ್ಯಕ್ತಿ ಅಥವಾಗುಂಪಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ, 5 ಸಾವಿರ ತನಕ ದಂಡ. ಯಾವುದೇ ಭಾವನಾತ್ಮಕ, ಮಾನಸಿಕ, ದೈಹಿಕ, ಸಾಮಾಜಿಕ ಅಥವಾ ಆರ್ಥಿಕ ಹಾನಿಯೂ ಶಿಕ್ಷೆ ವ್ಯಾಪ್ತಿಗೆ ತರಲು ಕರಡು ಸಿದ್ಧತೆ.

ಯಾವುದೇ ದತ್ತಾಂಶ, ಸಂದೇಶ, ಪಠ್ಯ ಚಿತ್ರಗಳು, ಧ್ವನಿ, ಧ್ವನಿ, ಸಂಕೇತಗಳು, ಕಂಪ್ಯೂಟರ್ ಪ್ರೋಗ್ರಾಮ್‌ಗಳು ಸಾಫ್ಟ್‌ವೇ‌ರ್ ಮತ್ತು ಡೇಟಾಬೇಸ್‌ಗಳು ಕಾನೂನು ವ್ಯಾಪ್ತಿಗೆ ತಂದು ಕುಣಿಕೆ. ಇನ್ನೊಬ್ಬ ವ್ಯಕ್ತಿಯ ಪರವಾಗಿ ಆ ದಾಖಲೆಯನ್ನು ಸ್ವೀಕರಿಸುವ, ಸಂಗ್ರಹಿಸುವವರು ಶಿಕ್ಷೆ ವ್ಯಾಪ್ತಿಗೆ ತರಲು ಕರಡು. ಯಾವುದೇ ವ್ಯಕ್ತಿ ಮತ್ತು ಪ್ರಸಾರ ಮಾಡುವ ವಾಹಿನಿಗಳು, ಸಾಮಾಜಿಕ ಮಾಧ್ಯಮ ವೇದಿಕೆಗಳು, ಸರ್ಚ್‌ ಇಂಜಿನ್‌ಗಳು ಸೇರಿದಂತೆ ಸೇವೆ ಒದಗಿಸುವ ಎಲ್ಲರೂ ಕಾನೂನು ವ್ಯಾಪ್ತಿಗೆ ತರುವ ಸಿದ್ಧತೆ ನಡೆಯುತ್ತಿದೆ. ಇದು ಎಷ್ಟರ ಮಟ್ಟಿಗೆ ಜಾರಿಯಾಗುವುದು ಎಂದು ಕಾದು ನೋಡಬೇಕಾಗಿದೆ.


Spread the love
Share:

administrator

Leave a Reply

Your email address will not be published. Required fields are marked *