Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭಾರತ-ಜಪಾನ್ ಬಾಂಧವ್ಯಕ್ಕೆ ಹೊಸ ಮೈಲಿಗಲ್ಲು; ಭಾರತಕ್ಕೆ ಜಪಾನ್ ಪ್ರಧಾನಿ ಸನೇ ತಕೈಚಿ ಆಗಮನ

Spread the love

ಹೊಸದಿಲ್ಲಿ: ಮೂರು ದಿನಗಳ ಅಧಿಕೃತ ಭಾರತ ಪ್ರವಾಸಕ್ಕಾಗಿ ಜಪಾನ್ ಪ್ರಧಾನಿ ಸನೇ ತಕೈಚಿ ಅವರು ಭಾರತಕ್ಕೆ ಆಗಮಿಸಿದ್ದಾರೆ. ಭಾರತಕ್ಕೆ ಇದೇ ಮೊದಲ ಬಾರಿಗೆ ಭೇಟಿ ನೀಡುತ್ತಿರುವ ತಕೈಚಿ ಅವರನ್ನು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಬರಮಾಡಿಕೊಂಡರು.
ಭಾರತ ಪ್ರವಾಸದ ಕುರಿತು ಜಪಾನ್ ಸರಕಾರದ ಸಾರ್ವಜನಿಕ ಸಂಪರ್ಕ ವಿಭಾಗವು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, “ಆತ್ಮೀಯ ಸ್ವಾಗತಕ್ಕಾಗಿ ಹೃತ್ತೂರ್ವಕ ಧನ್ಯವಾದಗಳು” ಎಂದು ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ತಕೈಚಿ ಅವರನ್ನು ಸ್ವಾಗತಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. “ಭಾರತಕ್ಕೆ ನಿಮಗೆ ಹೃತೂರ್ವಕ ಸ್ವಾಗತ. ಭಾರತಕ್ಕೆ ನಿಮ್ಮ ಮೊದಲ ಭೇಟಿಯಲ್ಲಿ ಅತಿಥ್ಯ ನೀಡುತ್ತಿರುವುದು ಸಂತಸದ ವಿಷಯ. ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಸಲು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸಲು ಭಾರತ-ಜಪಾನ್ ಸಹಕಾರವನ್ನು ಇನ್ನಷ್ಟು ವಿಸ್ತರಿಸಲಾಗುವುದು ಎಂದು ಮೋದಿ ಹೇಳಿದ್ದಾರೆ.
ಇದಕ್ಕೂ ಮುನ್ನ ತಕೈಚಿ ಅವರು, ಜಾಗತಿಕ ಮಟ್ಟದಲ್ಲಿ ಅನಿಶ್ಚಿತತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದೊಂದಿಗೆ ಸಹಕಾರದ ಮಹತ್ವ ಮತ್ತಷ್ಟು ಹೆಚ್ಚಿದೆ ಎಂದು ಹೇಳಿದ್ದರು.
ಈ ಮೂರು ದಿನಗಳ ಭೇಟಿಯ ವೇಳೆ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ ಸೇರಿದಂತೆ ಹಲವು ಮಹತ್ವದ ಸಭೆಗಳಲ್ಲಿ ಜಪಾನ್ ಪ್ರಧಾನಿ ಸನೇ ತಕೈಚಿ ಭಾಗವಹಿಸಲಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *