ಅಪಘಾತಗಳ ಹೊಳೆ: ಕರ್ನಾಟಕದ ಕರಾಳ ಗುರುವಾರ

ಬೆಂಗಳೂರು :ಕರ್ನಾಟಕ ಅಪಘಾತಗಳು: ಕರ್ನಾಟಕದ ಪಾಲಿಗೆ ಗುರುವಾರ ಕರಾಳ ದಿನವಾಗಿ ಪರಿಣಮಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ, ದಾವಣಗೆರೆ, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 17 ಮಂದಿ ಮೃತಪಟ್ಟು ಹತ್ತಾರು ಜನ ಗಾಯಗೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಬೆಂಗಳೂರುರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಚಾರ ಪೊಲೀಸರು ಅನೇಕ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದರೂ ದಿನನಿತ್ಯ ಆಕ್ಸಿಡೆಂಟ್ಗಳು ಮಾತ್ರ ತಪ್ಪುತ್ತಿಲ್ಲ. ಗುರುವಾರ ಒಂದೇ ದಿನ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ 17 ಜನ ಅಮೃತಪಟ್ಟಿದ್ದಾರೆ. ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇದರೊಂದಿಗೆ, ಕರ್ನಾಟಕದ ಪಾಲಿಗೆ ಗುರುವಾರ ಕರಾಳ ದಿನವಾಗಿ ಮಾರ್ಪಟ್ಟಿದೆ.
