ಅಬುಧಾಬಿ: ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷ ಬಿದ್ದು ಐವರು ಭಾರತೀಯರಿಗೆ ಗಾಯ

ಅಬುಧಾಬಿ: ಭದ್ರತಾಪಡೆಗಳು ಹೊಡೆದುರುಳಿಸಿದ ಬ್ಯಾಲಿಸ್ಟಿಕ್ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯ ಪ್ರಜೆಗಳು ಗಾಯಗೊಂಡಿದ್ದಾರೆ ಎಂದು ಅಬುಧಾಬಿ ಸರಕಾರಿ ಕಚೇರಿ ಪ್ರಕಟನೆಯಲ್ಲಿ ತಿಳಿಸಿದೆ.
ಘಟನೆಯಲ್ಲಿ ಐವರು ಭಾರತೀಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಮಾಧ್ಯಮ ಕಚೇರಿ ಹೇಳಿದೆ.
ನಗರದ ಖಲೀಫಾ ಆರ್ಥಿಕ ವಲಯದಲ್ಲಿ ಬಿದ್ದಿರುವ ಕ್ಷಿಪಣಿ ಅವಶೇಷಗಳಿಂದ ಉಂಟಾಗಿರುವ ಅಗ್ನಿಯನ್ನು ನಿಯಂತ್ರಿಸುವ ಕಾರ್ಯ ನಡೆಯುತ್ತಿದೆ ಎಂದು ಮಾಧ್ಯಮ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
