Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಿರಾಡಿ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಅಪಘಾತ: 16 ಮಂದಿಗೆ ಗಾಯ

Spread the love

ಉಪ್ಪಿನಂಗಡಿ : ಎರಡು ಕೆಎಸ್ಆರ್ ಟಿಸಿ ಬಸ್ ಗಳ ನಡುವೆ ನಡೆದ ಅಪಘಾತದಲ್ಲಿ 16 ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು – ಮಂಗಳೂರು ನಡುವಣ ಶಿರಾಡಿ ಬಳಿ ರವಿವಾರ ಸಂಜೆ ನಡೆದಿದೆ

ಅಪಘಾತದಲ್ಲಿ 16 ಮಂದಿ ಗಾಯಗೊಂಡಿದ್ದಾರೆ. ಸುಮಾರು 3 ಗಂಟೆ ಕಾಲ ವಾಹನಗಳ ಸಂಚಾರ ವ್ಯತ್ಯಯವಾಗಿತ್ತು. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸಾರಿಗೆ ಬಸ್‌ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ರಾಜಹಂಸ ಬಸ್‌ಗಳು ಶಿರಾಡಿ ಗ್ರಾಮದ ಗುಂಡ್ಯ ಬಳಿ ಢಿಕ್ಕಿ ಹೊಡೆದವು. ಸಾರಿಗೆ ಬಸ್‌ನಲ್ಲಿದ್ದ 9 ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಹಂಸದಲ್ಲಿದ್ದ 7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ವಾಹನಗಳ ಸಂಚಾರ ಸುಗಮಕ್ಕೆ ಅನುವು ಮಾಡಿಕೊಟ್ಟರು.


Spread the love
Share:

administrator

Leave a Reply

Your email address will not be published. Required fields are marked *