Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮನೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು ಮೂಲದ ಮಹಿಳಾ ಟೆಕ್ಕಿ ದುರ್ಮರಣ!

Spread the love

ಬೆಂಗಳೂರು: ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ (Ramamurthynagar) ಸುಬ್ರಮಣ್ಯ ಬಡಾವಣೆಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಜನವರಿ 3 ರ ರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಶರ್ಮಿಳಾ (34) ಮೃತ ದುರ್ದೈವಿ. ಶರ್ಮಿಳಾ ಮೂಲತಃ ಮಂಗಳೂರಿನವರು. ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ (Bengluru0 ಬಂದು ಅಕ್ಸೆಂಚರ್ ಸಾಫ್ಟ್ ವೇರ್ (Accenture Software) ಕಂಪನಿಯಲ್ಲಿ ಎಂಜಿನಿಯರ್ ಕೆಲಸ ಮಾಡ್ತಿದ್ದರು.

ಶರ್ಮಿಳಾ ವಾಸವಿದ್ದ ಫ್ಲ್ಯಾಟ್‌ನ ರೂಮ್‌ವೊಂದರಲ್ಲಿ ಮೊನ್ನೆ ರಾತ್ರಿ 10.30 ರ ಸುಮಾರಿಗೆ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿದೆ. ಇದನ್ನ ನೋಡಿದ ಮನೆ ಮಾಲೀಕ ವಿಜಯೇಂದ್ರ ರಾಮಮೂರ್ತಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಶರ್ಮಿಳಾ ಮನೆ ಬಳಿ ಬಂದಿದ್ದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು, ಮನೆಯ ಡೋರ್ ಒಡೆದು ಒಳಗೆ ಹೋಗಿದ್ದಾರೆ. ಈ ವೇಳೆ ರೂಮ್ ಹಾಗೂ ಹಾಲ್ ನಲ್ಲಿ ಬೆಂಕಿ ಬಿದ್ದು ಹೊಗೆ ತುಂಬಿಕೊಂಡಿತ್ತು. ಕೂಡಲೇ ಬೆಂಕಿ‌ ನಂದಿಸಿದ್ದ ಪೊಲೀಸ್ರು ಹಾಗೂ ಅಗ್ನಿಶಾಮಕ ಸಿಬ್ಬಂದಿ. ಮನೆ ಪರಿಶೀಲನೆ ವೇಳೆ ಶರ್ಮಿಳಾ ಪ್ರಜ್ಞೆ ತಪ್ಪಿ ಬಿದಿದ್ದು ಕಂಡು ಬಂದಿತು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ಶರ್ಮಿಳಾರನ್ನ ದಾಖಲಿಸಿದ್ರು. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಮೃತ ಪಟ್ಟಿರುವುದಾಗಿ ಖಚಿತಪಡಿಸಿದ್ರು.

ಬೆಂಕಿ ಬಿದ್ದಿದ್ದ ಪರಿಣಾಮ ರೂಮಿನಿಂದ ಹೊರ ಬರಲಾಗದೇ ಉಸಿರುಗಟ್ಟಿ ಟೆಕ್ಕಿ ಶರ್ಮಿಳಾ ಸಾವನ್ನಪ್ಪಿರೋ ಶಂಕೆ‌ ವ್ಯಕ್ತವಾಗಿದೆ. ಬೆಂಕಿ ಹೊತ್ತಿಕೊಳ್ಳಲು ಏನು ಕಾರಣ ಅಂತ ಹುಡುಕುತ್ತಿರೋ ಪೊಲೀಸರು. ಶಾರ್ಟ್ ಸೆರ್ಕ್ಯೂಟ್ ಅಥ್ವಾ ಬೆಡ್ ಲ್ಯಾಪ್ ಅಥ್ವಾ ಮೇಣದ ಬತ್ತಿಯಿಂದ ಬೆಂಕಿ ಹೊತ್ತಿಕೊಳ್ಳತ್ತಾ ಅನ್ನೋ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಬೆಂಕಿಯಿಂದ ರೂಮಿನಲ್ಲಿ ಬೆಡ್, ಕರ್ಟನ್ ಸೇರಿದಂತೆ ಎಲ್ಲಾ ಸುಟ್ಟು ಹೋಗಿವೆ. ಸ್ಥಳಕ್ಕೆ ಸೋಕೋ ಟೀಮ್, ಎಫ್‌ಎಸ್‌ಎಲ್‌ ತಂಡ ಭೇಟಿ ಪರಿಶೀಲನೆ ಮಾಡಿದೆ. ನಿಖರ ಕಾರಣ ತಿಳಿಯಲು ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.

ಇನ್ನೂ ಘಟನೆ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *