Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರಿನಲ್ಲಿ 24 ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್

Spread the love

ಮಂಗಳೂರು : 24 ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿದ್ದಾರೆ.ಬಂಧಿತನನ್ನು ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ.

ಆರೋಪಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ದಿನಾಂಕ 22-07-2025 ರಂದು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಬರ್ಕೆ ಪೊಲೀಸ್ ಠಾಣೆಗೆ ಹಸ್ತಾಂತರಿಸಿರುತ್ತಾರೆ.

ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು. ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ.
ಈತನ ಮೇಲೆ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣೆಗಳಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಉಪ್ಪಿನಂಗಡಿ, ಕಡಬ, ಪುತ್ತೂರ ನಗರ ಪೊಲೀಸ್ ಠಾಣೆಗಳಲ್ಲಿನ ವಿವಿಧ ಕಡೆಗಳಲ್ಲಿ ಸರಕಾರಿ ಕಛೇರಿ, ಶಾಲೆ ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆಸಿದ ಪ್ರಕರಣಗಳಲ್ಲಿ ಭಾಗಿಯಾಗಿರುವುದಲ್ಲದೇ ನ್ಯಾಯಾಂಗ ಬಂಧನದಲ್ಲಿದ್ದ ಸಮಯ ಕಾರಾಗೃಹದೊಳಗೆ ಇತರ ಖೈದಿಗಳಿಗೆ ಹಲ್ಲೆ ನಡೆಸಿರುವುದಲ್ಲದೇ ಜೈಲು ಸಿಬ್ಬಂದಿಯವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಕೊಲೆಗೆ ಯತ್ನ ನಡೆಸಿದ ಪ್ರಕರಣ ಸೇರಿದಂತೆ ಒಟ್ಟು 24 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದವನು ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.

ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿನ ಪ್ರಕರಣಗಳಲ್ಲಿ ನ್ಯಾಯಾಲಯದ ಒಟ್ಟು 24 ವಾರಂಟ್ ಇರುತ್ತದೆ. ಈತನ ಮೇಲೆ ಕೇರಳ ರಾಜ್ಯದ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಸಹ ಹಲವಾರು ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು


Spread the love
Share:

administrator

Leave a Reply

Your email address will not be published. Required fields are marked *