Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಟ ದರ್ಶನ್‌ ಮೇಕಪ್ ಆರ್ಟಿಸ್ಟ್ ಹೊನ್ನೇಗೌಡ ನಿಧನ: 25 ವರ್ಷಗಳ ಸಹಯಾತ್ರೆಗೆ ಕಂಬನಿ ಮಿಡಿದ ದರ್ಶನ್

Spread the love

ನಟ ದರ್ಶನ್‌ಗೆ 25 ವರ್ಷಗಳಿಂದ ಮೇಕಪ್ ಆರ್ಟಿಸ್ಟ್ ಆಗಿದ್ದ ಹೊನ್ನೇಗೌಡ ನಿಧನರಾಗಿದ್ದಾರೆ. ಆಪ್ತ ಹೊನ್ನೆಗೌಡ ನಿಧನದ ಬಗ್ಗೆ ನಟ ಕಂಬನಿ ಮಿಡಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟ ಭಾವುಕವಾಗಿ ಬರೆದುಕೊಂಡಿದ್ದಾರೆ.

25 ವರ್ಷಗಳಿಂದ ನನ್ನೊಂದಿಗೆ ಕೆಲಸ ಮಾಡಿದ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ಇಂದು ಅಗಲಿದ್ದಾರೆ. ಈ ಸುದ್ದಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೆಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ ಎಂದು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. 

‘ಡೆವಿಲ್’ ಸಿನಿಮಾ ಕೆಲಸದಲ್ಲಿ ದರ್ಶನ್ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ನಡೆಯುತ್ತಿದೆ. ಅವರೊಂದಿಗೆ ವಿನಯ್ ಗೌಡ, ಶರ್ಮಿಳಾ ಮಾಂಡ್ರೆ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಮಿಲನಾ ಪ್ರಕಾಶ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ದರ್ಶನ್ ನಟನೆಯ ‘ತಾರಕ್’ ಚಿತ್ರಕ್ಕೂ ಇವರೇ ನಿರ್ದೇಶನ ಮಾಡಿದ್ದರು.


Spread the love
Share:

administrator

Leave a Reply

Your email address will not be published. Required fields are marked *