Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ – ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

Spread the love

ಬೆಂಗಳೂರು : ಅಕ್ರಮ ಚಿನ್ನ ಸಾಗಾಟದಲ್ಲಿ ಸಿಕ್ಕಿಬಿದ್ದು ನಟಿ ರನ್ಯಾ ರಾವ್ ಜೈಲು ಪಾಲಾಗಿದ್ದಾರೆ. ಡಿಐಆರ್, ಸಿಬಿಐ ಹಾಗೇ ED ಈ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದು,​​ ಚಿನ್ನದ ಜಾಲ ಬಗೆದಷ್ಟು ಬಯಲಾಗುತ್ತಿದೆ. ಇನ್ನು ರನ್ಯಾ ರಾವ್​ ಗೋಲ್ಡ್​ ಸ್ಮಗ್ಲಿಂಗ್​​ ಹಿಂದೆ ಕರ್ನಾಟಕದ ಮಂತ್ರಿಗಳು ಇದ್ದಾರೆ ಎನ್ನುವ ಮಾತುಗಳು ಕೇಳಿಬಂದಿದೆ. ಈ ಮಧ್ಯೆ ಇದೀಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ರನ್ಯಾ ರಾವ್ ತಂಟೆಗೆ ಹೋಗಿ ಕೇಸ್​ ಹಾಕಿಸಿಕೊಂಡಿದ್ದಾರೆ.

ಹೌದು.. ಅಕ್ರಮ ಚಿನ್ನ ಸಾಗಾಣಿಕೆ ಆರೋಪದಡಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ವಿರುದ್ಧ ಅವಾಚ್ಯ ಪದ ಬಳಕೆ ಆರೋಪದಡಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ರನ್ಯಾ ರಾವ್ ವಿರುದ್ಧ ಅವಾಚ್ಯ ಪದ ಬಳಸಿ ತೇಜೋವಧೆ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಹೈಗ್ರೌಂಡ್ಸ್ ಪೊಲೀಸರಿಗೆ ರನ್ಯಾ ಆಪ್ತೆ ಅನುರಾಧ ಎಂಬುವರು ದೂರು ನೀಡಿದ್ದಾರೆ.

ಈ ದೂರಿನ ಹಿನ್ನಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 79ರ ಅಡಿ ಎಫ್‌ಐಆರ್ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *