Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜಧಾನಿ ಬೆಂಗಳೂರಿನಲ್ಲಿ ಆಡಳಿತ ಬದಲಾವಣೆ – ಗ್ರೇಟರ್ ಬೆಂಗಳೂರು ಪ್ರಾಧಿಕಾರ

Spread the love

ಬೆಂಗಳೂರು:ರಾಜಧಾನಿ ಬೆಂಗಳೂರಿನ ಆಡಳಿತದ ಹೊಣೆ ಹೊತ್ತಿದ್ದ ಬಿಬಿಎಂಪಿಗೆ ಕೊಕ್‌ ನೀಡಿ ನಾಳೆಯಿಂದ (ಮೇ 15) ಗ್ರೇಟರ್ ಬೆಂಗಳೂರು ಜಾರಿ ಆಗಲಿದೆ. ಆ ಮೂಲಕ ಬಿಬಿಎಂಪಿ ಗ್ರೇಟರ್ ಬೆಂಗಳೂರು ಅಥಾರಿಟಿ ಆಗಲಿದೆ.

ಮೇ 5ರಿಂದ ಗ್ರೇಟರ್ ಬೆಂಗಳೂರು ಜಾರಿಗೆ ಬರುವಂತೆ ಸರ್ಕಾರ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಗ್ರೇಟರ್ ಬೆಂಗಳೂರು ಅಥಾರಿಟಿಗೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್​​ಗೆ ಉಪಾಧ್ಯಕ್ಷರಾಗಲಿದ್ದಾರೆ.ಈಗಾಗಲೇ ಗ್ರೇಟರ್ ಬೆಂಗಳೂರಿಗೆ ರಾಜ್ಯಪಾಲರ ಗ್ರೀನ್ ಸಿಗ್ನಲ್​​ ಸಿಕ್ಕಿದ್ದು, ಇದರ ಬೆನ್ನಲ್ಲೇ ಸರ್ಕಾರ ನಾಳೆ (ಮೇ 15)ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ತಯಾರಿ ನಡೆಸಿತ್ತು. ಹಾಗಾಗಿ ನಾಳೆಯಿಂದ ಬಿಬಿಎಂಪಿ ಬದಲಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ಥಿತ್ವಕ್ಕೆ ಬರುತ್ತಿದೆ. ಆ ಮೂಲಕ ರಾಜಧಾನಿ ಬೆಂಗಳೂರಿನ ಆಡಳಿತದ ಚಿತ್ರಣವೇ ಬದಲಾಗಲಿದೆ. ಬೆಂಗಳೂರಿನ ಪ್ರಾದೇಶಿಕತೆ-ಭೌಗೋಳಿಕತೆಯ ವ್ಯಾಪ್ತಿ-ವಿಸ್ತೀರ್ಣ ಕೂಡ ಹೆಚ್ಚಾಗಲಿದೆ.


Spread the love
Share:

administrator

Leave a Reply

Your email address will not be published. Required fields are marked *