ಎರ್ ಇಂಡಿಯಾ ಪತನ: 169 ಭಾರತೀಯರು, 53 ಇಂಗ್ಲೆಂಡ್ ಪ್ರಜೆಗಳು

ಅಹಮದಾಬಾದ್ : ಗುಜರಾತ್ ನ ಅಹಮದಾಬಾದ್ ಏರ್ ಪೋರ್ಟ್ ನಿಂದ ಲಂಡನ್ ಗೆ ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ 242 ಜನ ಇದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಿ ನಗರದಲ್ಲಿ ಪತನಗೊಂಡಿತು 100ಕ್ಕೂ ಅಧಿಕ ಮಂದಿ ಸಾವನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಏರ್ ಇಂಡಿಯಾ ವಿಮಾನವು ಬೋಯಿಂಗ್ 787-8 ಡ್ರೀಮ್‌ಲೈನರ್ ಅವಳಿ ಜೆಟ್ ಆಗಿದ್ದು, ಒಟ್ಟು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿಯನ್ನು ಹೊತ್ತೊಯ್ದಿತ್ತು, ಪೈಲಟ್ ಇನ್ ಕಮಾಂಡ್ ಸುಮಿತ್ ಸಭರ್ವಾಲ್ ಮತ್ತು ಸಹ-ಪೈಲಟ್ ಕ್ಲೈವ್ ಕುಂದರ್ ಇದ್ದರು.
ಅಹಮದಾಬಾದ್‌ನಿಂದ ಮಧ್ಯಾಹ್ನ 3.38 ಕ್ಕೆ ಹೊರಟ ವಿಮಾನವು ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಇವರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು.
ನಾಗರಿಕ ವಿಮಾನಯಾನ ನಿರ್ದೇಶನಾಲಯದ (ಡಿಜಿಸಿಎ) ಹೇಳಿಕೆ ಪ್ರಕಾರ, ಈ ವಿಮಾನವು ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಮತ್ತು ಸಹ ಪೈಲಟ್ ಡ್ರೈವ್ ಕುಂದರ್ ಅವರ ನೇತೃತ್ವದಲ್ಲಿತ್ತು. ಕ್ಯಾಪ್ಟನ್ ಸುಮೀತ್ ಅವರು 8,200 ಗಂಟೆಗಳ ಅನುಭವ ಹೊಂದಿರುವ ಲೈನ್ ಟ್ರೈನಿಂಗ್ ಕ್ಯಾಪ್ಟನ್ (LTC) ಆಗಿದ್ದರೆ, ಸಹ ಪೈಲಟ್ 1,100 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದಾರೆ.
ಗುರುವಾರ ಮಧ್ಯಾಹ್ನ 1.39ಕ್ಕೆ ರನ್‌ವೇ 23ರಿಂದ ವಿಮಾನ ಟೇಕ್‌ಆಫ್ ಆಗಿತ್ತು. ಕೆಲವೇ ಕ್ಷಣಗಳಲ್ಲಿ ವಾಯು ಸಂಚಾರ ನಿಯಂತ್ರಣ ಘಟಕ (ಎಟಿಸಿ)ಕ್ಕೆ ಅಪಾಯದ ಮುನ್ಸೂಚನೆಯಾಗಿ ಪೈಲಟ್ ತುರ್ತು ಕರೆ ಮಾಡಿದ್ದರು, ಎಟಿಸಿ ವಾಪಸ್ ಕರೆ ಮಾಡಿದರೆ ಯಾವುದೇ ಪ್ರತಿಕ್ರಿಯೆ ಇರಲಿಲ್ಲ. ಬಳಿಕ ವಿಮಾನ ನಿಲ್ದಾಣದ ಪರಿಧಿಯ ಹೊರಭಾಗದಲ್ಲಿ ವಿಮಾನ ಪತನಗೊಂಡಿದ್ದು, ದಟ್ಟ ಹೊಗೆ ಆವರಿಸಿತ್ತು ಎಂದು ಡಿಜಿಸಿಎ ಹೇಳಿದೆ.