ಮಂಗಳೂರಿಗೆ ತರಲಾದ ಆಕಾಂಕ್ಷಾ ನಾಯರ್ ಮೃತದೇಹ

ಮಂಗಳೂರು: ಪಂಜಾಬ್ನನಲ್ಲಿ ನಿಗೂಢವಾಗಿ ಮೃತಪಟ್ಟ ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷಾ ಎಸ್ ನಾಯರ್ ಮೃತದೇಹವವನ್ನು ಬುಧವಾರ ಹುಟ್ಟೂರಿಗೆ ತರಲಾಯಿತು. ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹ ತರಲಾಯಿತು. ಭಾರೀ ಮಳೆಯ ಹಿನ್ನಲೆ ಮನೆಗೆ ಸಾಗುವ ದಾರಿಯಲ್ಲಿ ಆ್ಯಂಬುಲೆನ್ಸ್ ಮಣ್ಣಿನಲ್ಲಿ ಹೂತ ಘಟನೆಯೂ ನಡೆಯಿತು. ನಂತರ ಸ್ಥಳೀಯರು ಆ್ಯಂಬುಲೆನ್ಸ್ ಟೈರ್ ಅನ್ನು ಮಣ್ಣಿನಿಂದ ಹೊರತೆಗೆದರು. ಸದ್ಯ ಆಕಾಂಕ್ಷಾ ಮೃತದೇಹ ಬೋಳಿಯಾರ್ನಲ್ಲಿರುವ ಮನೆಗೆ ತಲುಪಿದೆ. ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಹೆಚ್ಚಾಗಿದೆ.