ಮದ್ಯಪಾನ ವ್ಯಸನಿಯಾಗಿದ್ದ ವ್ಯಕ್ತಿ ಚರಂಡಿಯಲ್ಲಿ ಶವವಾಗಿ ಪತ್ತೆ

ಬಂಟ್ವಾಳ:ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಚರಂಡಿಯೊಂದರಲ್ಲಿ ಸೋಮವಾರ ಬೆಳಿಗ್ಗೆ 55 ವರ್ಷದ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ವಿಟ್ಲ ಕಸಬಾ ಗ್ರಾಮದ ಕಾಶಿಮಠ ನಿವಾಸಿ, ಅಡಿಕೆ ಸಂಸ್ಕರಣಾ ಘಟಕದ ಉದ್ಯೋಗಿ ಮಂಜುನಾಥ (55) ಎಂದು ಗುರುತಿಸಲಾಗಿದೆ.
: ಮಂಜುನಾಥ ಅವರು ಭಾನುವಾರ ರಾತ್ರಿ 9:30 ರ ನಂತರ ಕಾಣೆಯಾಗಿದ್ದರು. ಸೋಮವಾರ ಬೆಳಿಗ್ಗೆ, ದಾರಿಹೋಕರು ಚರಂಡಿಯಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ತಿಳಿಸಿದ್ದಾರೆ.
: ಮೃತರು ಮದ್ಯಪಾನ ವ್ಯಸನಿಯಾಗಿದ್ದರು ಎಂದು ವರದಿಯಾಗಿದೆ, ಆದರೆ ಅವರು ಚರಂಡಿಗೆ ಬಿದ್ದು ಸಾವನ್ನಪ್ಪಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಮಾಹಿತಿ ತಿಳಿದ ತಕ್ಷಣ ವಿಟ್ಲ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಾಶ್ ದೇವಾಡಿಗ ಮತ್ತು ಠಾಣಾಧಿಕಾರಿ ರಾಮಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.