ನಂದಿನಿ ಪಾರ್ಲರ್‌ನಲ್ಲಿ ಮದ್ಯ ಮಾರಾಟ ಚಟುವಟಿಕೆ

ಮೈಸೂರು: ಹಾಲು ಮಾರುವ ನಂದಿನಿ ಪಾರ್ಲರ್‌ನಲ್ಲಿ ಮದ್ಯ ಮಾರಾಟ ಮಾಡುತ್ತಿರುವ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಡಿಯಾಲ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿರುವ ನಂದಿನಿ ಪಾರ್ಲರ್‌ನಲ್ಲಿ ಹೀಗೆ ಮದ್ಯ ಮಾರಾಟ ಮಾಡಲಾಗುತ್ತಿದೆ.
ರಹಸ್ಯವಾಗಿ ಮದ್ಯದ ಪ್ಯಾಕೆಟ್‌ಗಳನ್ನ ಗ್ರಾಹಕರಿಗೆ ನೀಡುವ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಮತ್ತು ಸಂಜೆ 7 ರಿಂದ ರಾತ್ರಿ 10 ಗಂಟೆವರೆಗೆ ಮದ್ಯ ಮಾರಾಟವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
