Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಂಜನಾಪುರ ಸರ್ಕಾರಿ ಶಾಲಾ ಮಕ್ಕಳಿಗೆ ಸ್ವೆಟರ್ ವಿತರಣೆ: ಶಾಸಕ ಎಂ. ಕೃಷ್ಣಪ್ಪ ಚಾಲನೆ

Spread the love

ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಅಂಜನಾಪುರ ಇಲ್ಲಿ 8 ಜನವರಿ 2026 ಗುರುವಾರ ಬೆಳಗ್ಗೆ 10.30 ಕ್ಕೆ ಕ್ರೇಜಿಬಿ ಎನ್ ಬಿಎಫ್‍ಸಿ ಸಂಸ್ಥೆ ಪ್ರಾಯೋಜಕತ್ವದಲ್ಲಿ ವಿಕೆ ಯುನಿವರ್ಸಲ್ ಫ್ಯಾಮಿಲಿ ಫೌಂಡೇಶನ್ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ ಸ್ವೆಟರ್ ವಿತರಣೆ ಮಾಡಲಾಯಿತು.

ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ಶ್ರೀ ಎಂ ಕೃಷ್ಣಪ್ಪನವರು, ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ದಕ್ಷಿಣ ವಲಯ 3 ಕ್ಷೇತ್ರಶಿಕ್ಷಣಾಧಿಕಾರಿಗಳಾದ ಡಾ. ಡಿ ಆರ್ ರಾಮಮೂರ್ತಿಯವರು, ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಶ್ರೀ ಸುರೇಶ್ ಆರ್ ನಾಯಕ್ ರವರು ಮತ್ತು ಇತರ ಅಧಿಕಾರಿಗಳು ಹಾಗೂ ವಿಕೆ ಯುನಿವರ್ಸಲ್ ಫ್ಯಾಮಿಲಿ ಫೌಂಡೇಶನ್ ನಿರ್ದೇಶಕರಾದ ಶ್ರೀಮತಿ ಅಶ್ವಿನಿ ಕುಂದಾಪುರ ಕ್ರೇಜಿ ಬಿ ಎನ್ ಬಿ ಎಫ್ ಸಿ ಸಂಸ್ಥೆಯ ಪ್ರತಿನಿಧಿಗಳು ಇತರ ಸ್ಥಳೀಯ ಮುಖಂಡರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ತೀವ್ರ ಚಳಿಗಾಳಿ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ ಮಕ್ಕಳು ಬೆಚ್ಚಗಿನ ಫುಲ್ ಓವರ್ ಧರಿಸಿ ಸಂತೋಷ ವ್ಯಕ್ತಪಡಿಸಿದರು


Spread the love
Share:

administrator

Leave a Reply

Your email address will not be published. Required fields are marked *