Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆರ್‌ಜಿಕರ್ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿಯ ಕುಟುಂಬಕ್ಕೆ ಮತ್ತೊಂದು ಆಘಾತ: 11 ವರ್ಷದ ಸೋದರ ಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Spread the love

ಕೋಲ್ಕತ್ತಾ: ಕೋಲ್ಕತ್ತಾದ ಆರ್ಜಿಕರ್ ಕಾಲೇಜಿನಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ(Murder) ಪ್ರಕರಣದ ಅಪರಾಧಿಯ ಸೋದರ ಸೊಸೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. 11 ವರ್ಷದ ಸೋದರ ಸೊಸೆ ಕೋಲ್ಕತ್ತಾದ ತನ್ನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಅಸಹಜ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭಾನುವಾರ ಘಟನೆ ನಡೆದಾಗ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಯಿಯನ್ನು ಕಳೆದುಕೊಂಡಿರುವ ಬಾಲಕಿ ತನ್ನ ಚಿಕ್ಕಮ್ಮ ಪೂಜಾ ರಾಯ್ ಜೊತೆ ವಾಸಿಸುತ್ತಿದ್ದಳು. ಆಕೆಯ ಕುಟುಂಬ ಸದಸ್ಯರು ಮಾರುಕಟ್ಟೆಯಿಂದ ಹಿಂತಿರುಗಿದಾಗ, ಆಕೆಯ ಕೋಣೆಯ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡರು. ಪದೇ ಪದೇ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ಅವರು ಬಾಗಿಲು ಒಡೆದು ನೋಡಿದಾಗ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ತಂಡವೊಂದು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ಕಳುಹಿಸಲಾಗಿದೆ.
ಬಾಲಕಿಯ ಕಾಲುಗಳ ಒಂದು ಭಾಗ ನೆಲವನ್ನು ಮುಟ್ಟುತ್ತಿರುವುದನ್ನು ಗಮನಿಸಿದ ಪೊಲೀಸ್ ಮೂಲವೊಂದು ಇದು ಆತ್ಮಹತ್ಯೆಯೇ ಕಾಣುತ್ತದೆ ಎಂದು ಹೇಳಿದ್ದಾರೆ.

ಅಲಿಪೋರ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಬಾಲಕಿ ಖಿನ್ನತೆಯಿಂದ ಬಳಲುತ್ತಿದ್ದಾಳೇ ಅಥವಾ ಆಕೆಯ ಸಾವಿಗೆ ಬೇರೆ ಯಾವುದಾದರೂ ಕಾರಣಗಳಿವೆಯೇ ಎಂದು ನಿರ್ಧರಿಸಲು ಪೊಲೀಸರು ಕುಟುಂಬ ಸದಸ್ಯರು ಮತ್ತು ಅಕ್ಕಪಕ್ಕದ ಮನೆಯವರನ್ನು ಪ್ರಶ್ನಿಸುತ್ತಿದ್ದಾರೆ.
ಈ ಘಟನೆಯು ಆ ಪ್ರದೇಶದಲ್ಲಿ ಭೀತಿಯನ್ನು ಹುಟ್ಟುಹಾಕಿದ್ದು, ಹುಡುಗಿಯ ಮಾವ ಸಂಜಯ್ ರಾಯ್ ಒಳಗೊಂಡ ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ಈ ಘಟನೆ ಗಮನ ಸೆಳೆದಿದೆ.

ರಾಯ್, ಕಳೆದ ವರ್ಷ ಕೋಲ್ಕತ್ತಾದ ಪ್ರಸಿದ್ಧ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ 26 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ.


Spread the love
Share:

administrator

Leave a Reply

Your email address will not be published. Required fields are marked *