Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮತ್ತೊಂದು ಭೀಕರ ಅಪಘಾತ – ಮಹಾಕುಂಭಮೇಳಕ್ಕೆ ತೆರಳಿದ್ದ ಗೋಕಾಕ ನ 6 ಮಂದಿ ಸಾವು.

Spread the love

ಮಧ್ಯಪ್ರದೇಶ : ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ಕರ್ನಾಟಕದಿಂದ ತೆರಳುತ್ತಿರುವ ಪ್ರಯಾಣಿಕರು ಅಪಘಾತಕೀಡಾಗುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ 5 ಮಂದಿ ಸಾವನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ಅಪಘಾತದಲ್ಲಿ ಹೋಗಿದ್ದ 6 ಜನರು, ಮಧ್ಯಪ್ರದೇಶದ ಜಬಲಪುರ್ ಬಳಿ ಸೋಮವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮೃತರನ್ನು ಬಾಲಚಂದ್ರ ಗೌಡರ(50), ಸುನೀಲ ಶೇಡಶ್ಯಾಳೆ (45), ಬಸವರಾಜ ಕುರ್ತಿ(63), ಬಸವರಾಜ ದೊಡಮಾಳ(49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು. ತೂಫಾನ್‌ ವಾಹನದಲ್ಲಿ ಇವರೆಲ್ಲರೂ ಪ್ರಯಾಗರಾಜ್‌ಗೆ ತೆರಳಿದ್ದರು. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಡಿವೈಡರ್ ದಾಟಿ ಮತ್ತೊಂದು ದಿಕ್ಕಿನಲ್ಲಿ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಬಲಪು‌ರ್ ಜಿಲ್ಲಾಧಿಕಾರಿ ದೀಪಕ್ ಸಕ್ಷೇನಾ ಹೇಳಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ದೀಪಕ್ ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *