Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ: ಮೊದಲ ಎಸೆತದಲ್ಲಿ 10 ಬೌಂಡರಿಗಳೊಂದಿಗೆ ಯಶಸ್ವಿ ಜೈಸ್ವಾಲ್ ಅದ್ವಿತೀಯ ಸಾಧನೆ

Spread the love

ಇಂಡಿಯನ್ ಪ್ರೀಮಿಯರ್ ಲೀಗ್​ನ 61ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು 187 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ 19 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 36 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು 6 ವಿಕೆಟ್​ಗಳ ಜಯ ಸಾಧಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 61ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸಿದ್ದರು.

ಸಿಎಸ್​ಕೆ ವಿರುದ್ಧದ ಈ ಪಂದ್ಯದಲ್ಲಿ ಆರಂಭಿಕನಾಗಿ ಕಾಣಿಸಿಕೊಂಡ ಯಶಸ್ವಿ ಜೈಸ್ವಾಲ್ ಮೊದಲ ಎಸೆತದಲ್ಲೇ ಫೋರ್ ಬಾರಿಸಿದರು. ಈ ಫೋರ್​ನೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಇನಿಂಗ್ಸ್​ನ ಮೊದಲ ಎಸೆತದಲ್ಲಿ ಅತೀ ಹೆಚ್ಚು ಬಾರಿ ಬೌಂಡರಿ ಬಾರಿಸಿದ ದಾಖಲೆಯೊಂದು ಯಶಸ್ವಿ ಜೈಸ್ವಾಲ್ ಪಾಲಾಯಿತು.

ಇದಕ್ಕೂ ಮುನ್ನ ಇಂತಹದೊಂದು ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು. ಡ್ಯಾಶಿಂಗ್ ಓಪನರ್ ಆಗಿ ಗುರುತಿಸಿಕೊಂಡಿದ್ದ ಸೆಹ್ವಾಗ್ 2014 ರ ಐಪಿಎಲ್​ನಲ್ಲಿ 5 ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

2023 ರಲ್ಲಿ ಯಶಸ್ವಿ ಜೈಸ್ವಾಲ್ 5 ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿ ವೀರೇಂದ್ರ ಸೆಹ್ವಾಗ್ ಅವರ ದಾಖಲೆ ಸರಿಗಟ್ಟಿದ್ದರು. ಇದೀಗ 2025 ರಲ್ಲೂ ಈ ಸಾಧನೆಯನ್ನು ಪುನರಾವರ್ತಿಸಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ 14 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿರುವ ಯಶಸ್ವಿ ಜೈಸ್ವಾಲ್ 5 ಬಾರಿ ಮೊದಲ ಎಸೆತದಲ್ಲೇ ಬೌಂಡರಿ ಸಿಡಿಸಿದ್ದಾರೆ.

ಈ ಮೂಲಕ ಐಪಿಎಲ್​ ಇತಿಹಾಸದಲ್ಲಿ ಎರಡು ಸೀಸನ್​ಗಳಲ್ಲಿ 10 ಬಾರಿ ಇನಿಂಗ್ಸ್​ನ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿ ವಿಶೇಷ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ದಾಖಲೆಯೊಂದಿಗೆ ಯಶಸ್ವಿ ಜೈಸ್ವಾಲ್ ಈ ಬಾರಿ 559 ರನ್​ ಕಲೆಹಾಕುವ ಮೂಲಕ ಐಪಿಎಲ್ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *