Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಿಎಂಎಸ್ ಕಾಲೇಜಿನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ

Spread the love

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿರುವ ಬಸವನಗುಡಿಯಲ್ಲಿರುವ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಳೆದೊಂದು ತಿಂಗಳ ಹಿಂದೆ ಇದೇ ಕಾಲೇಜಿನ ವಿದ್ಯಾರ್ಥಿ ಕಟ್ಟಡದ ಮೇಲಿಂದ ಜಿಗಿದು ಸಾವಿಗೆ ಶರಣಾಗಿದ್ದನು. ಇದೀಗ ಮತ್ತೊಂದು ಘಟನೆ ನಡೆದಿದೆ.
ಬೆಂಗಳೂರಿನ ಹನುಮಂತ ನಗರದ ಪಿಜಿಯಲ್ಲಿ ಕಳೆದ ಎರಡು ದಿನಗಳ ಹಿಂದೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಆದಿತ್ಯಾ ಸಿಂಗ್ (19) ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 1st ಸೆಮಿಸ್ಟರ್ ಒದುತ್ತಿದ್ದನು. ಈತ ಮೂಲತಃ ಉತ್ತರಪ್ರದೇಶ ರಾಜ್ಯದವನಾಗಿದ್ದು, ಬೆಂಗಳೂರಿನಲ್ಲಿ ಅಭ್ಯಾಸ ಮಾಡುತ್ತಿದ್ದನು. ಆದರೆ, ಈತನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಅದರಲ್ಲಿಯೂ ಒಂದೇ ಕಾಲೇಜಿನಲ್ಲಿ ಒಂದು ತಿಂಗಳ ಅಂತರದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ಕಾಲೇಜು ಆಡಳಿತ ಮಂಡಳಿ ವಿರುದ್ಧ ಅನುಮಾನ ಬರುವಂತ ಮಾಡಿದೆ.

ಇನ್ನು ವಿದ್ಯಾರ್ಥಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲಿಯೇ ಹನುಮಂತನರದ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಹನುಮಂತನಗರ ಠಾಣೆ ಪೊಲೀಸರು ಪಿಜಿಗೆ ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದೀಗ ವಿದ್ಯಾರ್ಥಿ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದ್ದು, ಕಳೇಬರವನ್ನು ವಿದ್ಯಾರ್ಥಿ ಪೋಷಕರಿಗೆ ರವಾನಿಸಲಾಗಿದೆ. ಮಗನನ್ನು ಬೆಂಗಳೂರು ಕಾಲೇಜಿಗೆ ಓದಲು ಸೇರಿಸಿ, ತಂಗಲು ಪಿಜಿ ವ್ಯವಸ್ಥೆ ಮಾಡಿ ಬಿಟ್ಟು ಹೋಗಿದ್ದರು. ಆದರೆ, ಇದೀಗ ಅವರೇ ಬಂದು ಮಗನ ಮೃತದೇಹವನ್ನು ಊರಿಗೆ ತೆಗೆದುಕೊಂಡು ಹೋಗಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಘಟನೆಗೆ ಕುರಿತಂತೆ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.
ಕಳೆದ ತಿಂಗಳು ಅಂದರೆ ಜ.18ರಂದು ಇದೇ ಬಿಎಂಎಸ್ ಕಾಲೇಜಿನ ಬಹುಮಹಡಿ ಕಟ್ಟಡದಿಂದ ಜಿಗಿದು ಅಕ್ಷಯ್ ರೆಡ್ಡಿ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದನು. ನಾಲ್ಕನೇ ವರ್ಷದ ಏರೋಸ್ಪೇಸ್ ವಿದ್ಯಾರ್ಥಿಯಾಗಿದ್ದ (Aerospace Student) ಅಕ್ಷಯ್ ಕಾಲೇಜು ಕಟ್ಟಡದಿಂದ ಹಾರಿದ್ದನು. ಆತ್ಮಹತ್ಯೆಗೆ ಅಧಿಕೃತ ಕಾರಣ ತಿಳಿದು ಬಂದಿರಲಿಲ್ಲ. ಕಾಲೇಜು ಆಡಳಿತ ಮಂಡಳಿಯ ಟಾರ್ಚರ್‌ನಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಇದೀಗ ಒಂದೇ ತಿಂಗಳ ಅಂತರದಲ್ಲಿ ಎರಡನೇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈತನ ಸಾವಿಗೂ ಕಾರಣ ತಿಳಿದುಬಂದಿಲ್ಲ.


Spread the love
Share:

administrator

Leave a Reply

Your email address will not be published. Required fields are marked *