Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅನುರಾಗ್ ಕಶ್ಯಪ್: ತನ್ನಿಂದಾದ ಆಗಿರುವ ತಪ್ಪಿಗೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದರು

Spread the love

ಮುಂಬೈ: ಶಿಕ್ಷಣ ಕ್ರಾಂತಿ ಎಬ್ಬಿಸಿದ ಸಾವಿತ್ರಿಭಾಯಿ ಪುಲೆ ಜೀವನಾಧಾರಿತ ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದಾತ್ಮಕ ರೂಪ ಪಡೆದುಕೊಂಡಿದ್ದು, ಟೀಕಿಸುವ ಭರದಲ್ಲಿ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ ಎಂದು ಪ್ರಶ್ನಿಸುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಸದ್ಯ ಅವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಬ್ರಾಹ್ಮಣ ಸಮುದಾಯದ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ ನಂತರ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಇದೀಗ ಅನುರಾಗ್ ಕಶ್ಯಪ್ ತಾವಾಡಿದ ಮಾತುಗಳಿಗೆ ಕ್ಷಮೆಯನ್ನು ಕೇಳಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅನುರಾಗ್ ಕಶ್ಯಪ್ ಇದು ನನ್ನ ಕ್ಷಮಾಪಣೆ. ನಾನು ಹೇಳಿದ ಮಾತುಗಳಿಗೆ ಅಲ್ಲ, ಬದಲಿಗೆ ನನ್ನ ಪೋಸ್ಟ್‌ನಲ್ಲಿರುವ ಒಂದು ಸಾಲನ್ನು ಮಾತ್ರ ಎತ್ತಿಕೊಂಡು ದ್ವೇಷ ಹರಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಸಾವಿತ್ರಿಭಾಯಿ ಪುಲೆ ಜೀವಾಧಾರಿತ ಸಿನಿಮಾವನ್ನು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್‍ಗೆ ಕಳುಹಿಸಲಾಗಿತ್ತು. ಚಿತ್ರಕ್ಕೆ ಯು ಸರ್ಟಿಫಿಕೇಟ್ ಸಿಕ್ಕಿತ್ತು. ಆದರೆ ಕೆಲ ದೃಶ್ಯಗಳಿಗೆ ಕತ್ತರಿ ಹಾಕುವಂತೆ ನಿರ್ದೇಶಿಸಿತ್ತು.ಪ್ರ್ರಮುಖವಾಗಿ ಈ ಸಿನಿಮಾದಲ್ಲಿ ಬರುವ ಜಾತಿ ಆಧಾರಿತ ಹೆಸರುಗಳು, 3000 ವರ್ಷಗಳ ಗುಲಾಮಿ ಸೇರಿದಂತೆ ಕೆಲ ಡೈಲಾಗ್‍ಗಳಿಗೂ ಕತ್ತರಿ ಹಾಕುವಂತೆ ಸೂಚಿಸಿತ್ತು. ಈ ಸಿನಿಮಾಗೆ ಮಹಾರಾಷ್ಟ್ರದಲ್ಲಿ ಬ್ರಾಹ್ಮಣ ಸಮುದಾಯ ವಿರೋಧಿಸಿತ್ತು. ವಿರೋಧ ಜಾಸ್ತಿ ಆಗುತ್ತಿದ್ದಂತೆ ಏ. 11ಕ್ಕೆ ಬಿಡುಗಡೆಯಾಗಬೇಕಿದ್ದ ಸಿನಿಮಾ ಏ. 25ಕ್ಕೆ ಮುಂದೂಡಿಕೆಯಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಇನ್‍ಸ್ಟಾದಲ್ಲಿ ಅನುರಾಗ್ ಕಶ್ಯಪ್ ಪೋಸ್ಟ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪೋಸ್ಟ್ ಪ್ರತಿಕ್ರಿಯೆ ನೀಡುವ ಸಂದರ್ಭದಲ್ಲಿ ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ, ಏನಿವಾಗ ಪ್ರಶ್ನಿಸುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅನುರಾಗ್ ಕಶ್ಯಪ್ ವಿರುದ್ಧ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಕಶ್ಯಪ್ ಪೋಸ್ಟ್‍ನ ಸ್ಕ್ರೀನ್ ಶಾಟ್ ಅಪ್ಲೋಡ್ ಮಾಡಿ ಜನರು ಈಗ ಮುಂಬೈ ಪೊಲೀಸರಿಗೆ ದೂರು ನೀಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *