Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಗ್ಗುಂಡಿ ಕೆರೆ ಪುನಶ್ಚತನಕ್ಕೆ ‘ದ ಸ್ಯಾಫ್ರನ್ ಫ್ರಂಟ್’ ಮನವಿ: ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಡಳಿತ

Spread the love

ಮಂಗಳೂರು: ಬಗ್ಗುಂಡಿ ಕೆರೆಗೆ ಮೂರು ಕಡೆಗಳಿಂದ ತ್ಯಾಜ್ಯ ಹರಿಯುತ್ತಿರುವ ಆರೋಪದ ಹಿನ್ನೆಲೆಯಲ್ಲಿ, ಕೃಷಿಕರ ಹಿತಾಸಕ್ತಿ, ಪರಿಸರ ಹಾಗೂ ಸಾರ್ವಜನಿಕ ಆರೋಗ್ಯದ ರಕ್ಷಣೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದ ಸ್ಯಾಫ್ರನ್ ಫ್ರಂಟ್ ರಾಷ್ಟ್ರೀಯ ಅಧ್ಯಕ್ಷ ರಾಜೇಶ್ ಪವಿತ್ರನ್ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ದೂರು ಸಲ್ಲಿಸಿದ್ದಾರೆ.
ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಬಿಪಿಸಿಎಲ್ ಸಂಸ್ಥೆ, ಕೆರೆಯ ಅಕ್ಕಪಕ್ಕದಲ್ಲಿರುವ ವಸತಿ ಸಮುಚ್ಚಯಗಳು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ವೆಟ್‌ವೆಲ್‌ನಿಂದ ನೇರವಾಗಿ ಬಗ್ಗುಂಡಿ ಕೆರೆಗೆ ತ್ಯಾಜ್ಯ ಹರಿಯುತ್ತಿದೆ ಎಂದು ಆರೋಪಿಸಲಾಗಿದೆ. ಇದರಿಂದ ಸುತ್ತಮುತ್ತಲಿನ ಕೃಷಿ ಭೂಮಿ, ಅಂತರ್ಜಲ ಹಾಗೂ ಪರಿಸರ ವ್ಯವಸ್ಥೆಗೆ ಹಾನಿಯಾಗಿದ್ದು, ರೈತರ ಕೃಷಿ ಚಟುವಟಿಕೆಗಳು ಮತ್ತು ಜೀವನೋಪಾಯಕ್ಕೆ ಸಂಕಷ್ಟ ಉಂಟಾಗಿದೆ ಎಂದು ದೂರಿನಲ್ಲಿ ಕಳವಳ ವ್ಯಕ್ತಪಡಿಸಲಾಗಿದೆ.
ಜಿಲ್ಲಾಡಳಿತವು ಸಂಬಂಧಪಟ್ಟ ಇಲಾಖೆಗಳೊಂದಿಗೆ ತುರ್ತು ಸ್ಥಳ ಪರಿಶೀಲನೆ ನಡೆಸಿ, ಮೂರು ಕಡೆಗಳಿಂದ ಹರಿಯುತ್ತಿರುವ ತ್ಯಾಜ್ಯದ ಮೂಲವನ್ನು ಪತ್ತೆಹಚ್ಚಬೇಕು. ಅನಧಿಕೃತ ತ್ಯಾಜ್ಯ ವಿಸರ್ಜನೆಯನ್ನು ಸ್ಥಗಿತಗೊಳಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕೆರೆಯಲ್ಲಿನ ವಿಷಕಾರಿ ಕೆಸರನ್ನು ತೆರವುಗೊಳಿಸಿ, ಪರಿಸರ ವ್ಯವಸ್ಥೆಯನ್ನು ಪುನರುಜ್ಜೀವನಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.
ಮಾಲಿನ್ಯದಿಂದ ನಷ್ಟ ಅನುಭವಿಸಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು. ಜಿಲ್ಲಾಡಳಿತ ತ್ವರಿತ ಕ್ರಮ ಕೈಗೊಳ್ಳದಿದ್ದರೆ ಸ್ಥಳೀಯ ರೈತರು ಹಾಗೂ ಸಾರ್ವಜನಿಕರೊಂದಿಗೆ ಬೃಹತ್ ಪ್ರತಿಭಟನೆ ನಡೆಸುವುದರ ಜೊತೆಗೆ ಕಾನೂನು ಹೋರಾಟ ನಡೆಸಲು ದ ಸ್ಯಾಫ್ರನ್ ಫ್ರಂಟ್ ನಿರ್ಧರಿಸಿದೆ.


Spread the love
Share:

administrator

Leave a Reply

Your email address will not be published. Required fields are marked *