ಹಾಡುತ್ತಾ ಕುಸಿದುಬಿದ್ದು ASI ದುರ್ಮರಣ”: ಉಡುಪಿಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ!

ಉಡುಪಿ: ಉಡುಪಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಾರ್ಯಕ್ರಮವೊಂದರಲ್ಲಿ ಹಾಡು ಹಾಡುತ್ತಿದ್ದಾಗಲೇ ಕುಸಿದು ಬಿದ್ದು ಎಎಸ್ ಐಯೊಬ್ಬರು ಮೃತಪಟ್ಟಿದ್ದಾರೆ.

ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಾಡುತ್ತಿದ್ದ ವೇಳೆ ಕುಸಿದು ಬಿದ್ದು ಉಡುಪಿ ಜಿಲ್ಲೆ ಮಲ್ಪೆ ಪೊಲೀಸ್ ಠಾಣೆಯ ಎಎಸ್ಐ ವಿಶ್ವನಾಥ್(58) ಸಾವನ್ನಪ್ಪಿದ್ದಾರೆ.
ಎಎಸ್ಐ ವಿಶ್ವನಾಥ್ ವೇದಿಕೆಯಲ್ಲಿ ಹಾಡುತ್ತಿದ್ದಾಗ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಹೃದಯಾಘಾತದಿಂದ ವಿಶ್ವನಾಥ್ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ.
ಉಡುಪಿ ಜಿಲ್ಲೆಯ ಪೊಲೀಸ್ ಘಟಕದಲ್ಲಿ ಕಳೆದ 32 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಮಲ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.