Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಏಷ್ಯನ್ ಗೇಮ್ಸ್: ಭಾರತೀಯ ಮಹಿಳಾ ಕ್ರಿಕೆಟ್ ತಂಡ ಪ್ರಕಟ; ತಂಡದಲ್ಲಿ ಮಹತ್ವದ ಬದಲಾವಣೆ!

Spread the love

ಹೊಸದಿಲ್ಲಿ: ಜಪಾನ್ ನಲ್ಲಿ ಸೆಪ್ಟೆಂಬರ್ ನಲ್ಲಿ ನಡೆಯಲಿರುವ ಏಶ್ಯನ್ ಕ್ರೀಡಾಕೂಟದ ಮಹಿಳೆಯರ ಕ್ರಿಕೆಟ್ ಸ್ಪರ್ಧೆಗಾಗಿ ಭಾರತ ತನ್ನ ತಂಡದಲ್ಲಿ ಗಮನಾರ್ಹ ಬದಲಾವಣೆ ಮಾಡಿದೆ. ಯಸ್ತಿಕಾ ಭಾಟಿಯಾ ಬದಲಿಗೆ 17 ವರ್ಷದ ವಿಕೆಟ್ ಕೀಪರ್-ಬ್ಯಾಟರ್ ಜಿ. ಕಮಲಿನಿ ಅವರನ್ನು ಆಯ್ಕೆ ಮಾಡಲಾಗಿದೆ.
ಮಹಿಳೆಯರ ಟಿ20 ವಿಶ್ವಕಪ್‌ನಲ್ಲಿ ಗುಂಪು ಹಂತದಲ್ಲೇ ನಿರ್ಗಮಿಸಿದ್ದ ತಂಡದಲ್ಲಿ ಯಾವುದೇ ದೊಡ್ಡ ಬದಲಾವಣೆ ಮಾಡಿಲ್ಲ.
ವಿಶ್ವಕಪ್ ಟೂರ್ನಿಯ ವೇಳೆ ಕಾಲಿನ ಗಾಯಕ್ಕೆ ಒಳಗಾಗಿದ್ದ ಆಫ್‌ಸ್ಪಿನ್ ಆಲ್‌ರೌಂಡರ್ ಶ್ರೇಯಾಂಕಾ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ. ಅವರ ಲಭ್ಯತೆಯು ಫಿಟೈಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದನ್ನು ಅವಲಂಬಿಸಿದೆ.

ವಿಶ್ವಕಪ್ ಪಂದ್ಯಾವಳಿಯಲ್ಲಿ ಶ್ರೇಯಾಂಕಾ ಬದಲಿಗೆ ಆಯ್ಕೆಯಾಗಿದ್ದ ಲೆಗ್‌ಸ್ಪಿನ್ನರ್ ಪ್ರೇಮಾ ರಾವತ್‌ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲು ವಿಫಲರಾಗಿದ್ದಾರೆ.
ಡಬ್ಲ್ಯುಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಉತ್ತಮ ಪ್ರದರ್ಶನ ನೀಡಿದ್ದ ಕಮಲಿನಿ, ಭಾರತದ ಪರ ಏಕೈಕ ಟಿ20 ಪಂದ್ಯವನ್ನಾಡಿದ್ದರು. ಭಾಟಿಯಾ ಮೂರು ವಿಶ್ವಕಪ್ ಪಂದ್ಯಗಳನ್ನಾಡಿದ್ದು, ಒಟ್ಟು 41 ರನ್ ಗಳಿಸಿದ್ದರು.
2023ರ ಏಶ್ಯನ್ ಗೇಮ್ಸ್‌ನಲ್ಲಿ ಗೆದ್ದ ಚಿನ್ನದ ಪದಕವನ್ನು ಉಳಿಸಿಕೊಳ್ಳಲು ಬಯಸಿರುವ ಮಹಿಳೆಯರ ಕ್ರಿಕೆಟ್ ತಂಡವು ಬಾಂಗ್ಲಾದೇಶ, ಪಾಕಿಸ್ತಾನ, ಶ್ರೀಲಂಕಾ, ಜಪಾನ್, ಥಾಯ್ಲೆಂಡ್, ಮಲೇಶ್ಯಾ ಹಾಗೂ ಚೀನಾ ತಂಡಗಳೊಂದಿಗೆ ಸ್ಪರ್ಧಿಸಲಿದೆ.
ಭಾರತದ ಮಹಿಳೆಯರ ಕ್ರಿಕೆಟ್ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪ ನಾಯಕಿ), ಶೆಫಾಲಿ ವರ್ಮಾ, ಜೆಮಿಮಾ ರೊಡ್ರಿಗ್ಸ್, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಜಿ. ಕಮಲಿನಿ (ವಿಕೆಟ್ ಕೀಪರ್), ಭಾರತಿ ಫುಲ್ಮಾಲಿ, ಶ್ರೀ ಚರಣಿ, ರೇಣುಕಾ ಸಿಂಗ್, ಕ್ರಾಂತಿ ಗೌಡ್, ಅರುಂಧತಿ ರೆಡ್ಡಿ ಶ್ರೇಯಾಂಕಾ ಪಾಟೀಲ್ (ಫಿಟೈಸ್ ಆಧರಿಸಿದೆ), ರಾಧಾ ಯಾದವ್, ನಂದಿನಿ ಶರ್ಮಾ.


Spread the love
Share:

administrator

Leave a Reply

Your email address will not be published. Required fields are marked *