ವೈದ್ಯರ ಮೇಲೆ ಹಲ್ಲೆ ಪ್ರಕರಣ: ಮಾಜಿ ಸಂಸದ ಅನಂತಕುಮಾರ್ ಹೆಗಡೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಮಾಜಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ 2017ರಲ್ಲಿ ವೈದ್ಯರ ಮೇಲೆ ಹಲ್ಲೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಸಿಲ್ಲಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ವಕೀಲರ ಸತತ ಗೈರುಹಾಜರಿ ಮತ್ತು ಸರ್ಕಾರಿ ವಕೀಲರಿಗೆ ಅರ್ಜಿ ಪ್ರತಿ ನೀಡದ ಹಿನ್ನೆಲೆ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಲಾಗಿದೆ.
ವೈದ್ಯರ ಮೇಲೆ ಹಲ್ಲೆ ಕೇಸ್: ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಮಾಜಿ ಸಂಸದ ಅನಂತ ಕುಮಾರ್ ಹೆಗಡೆ
2017ರಲ್ಲಿ ವೈದ್ಯರ ಮೇಲೆ ಹಲ್ಲೆ (Attack) ಮಾಡಿದ್ದ ಪ್ರಕರಣವನ್ನು ರದ್ಧು ಕೋರಿ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ (Ananth Kumar Hegde) ಸಲ್ಲಿಸಿದ್ದ ಅರ್ಜಿಯನ್ನು ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿ ಗುರುವಾರ ಆದೇಶ ಹೊರಡಿಸಿದೆ. ಈ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ಪರ ವಕೀಲರು ಸತತ ಗೈರು ಹಾಜರಿ ಹಿನ್ನೆಲೆ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಸೂಚಿಸಿದ್ದರೂ ಸರ್ಕಾರಿ ವಕೀಲರಿಗೆ ಅರ್ಜಿ ಪ್ರತಿ ಸಲ್ಲಿಸದ ಹಿನ್ನೆಲೆ ಅನಂತ ಕುಮಾರ್ ಹೆಗಡೆ ಅರ್ಜಿವನ್ನು ಹೈಕೋರ್ಟ್ ವಜಾಗೊಳಿಸಿದೆ.
ಏನಿದು ಪ್ರಕರಣ?
ತಾಯಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡಿಲ್ಲವೆಂದು ಮಾಜಿ ಸಂಸದ ಅನಂತ ಕುಮಾರ್ ಹೆಗಡೆ ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. 2017ರಲ್ಲಿ ಅನಂತಕುಮಾರ್ ಹೆಗಡೆ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಬಳಿಕ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು.