Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಯೋಧ್ಯೆ ರಾಮ ಮಂದಿರ ದೇಣಿಗೆ ದುರುಪಯೋಗ: ಸ್ಫೋಟಕ ಹೇಳಿಕೆ ನೀಡಿದ ಬ್ರಿಜ್ ಭೂಷಣ್ ಶರಣ್ ಸಿಂಗ್!

Spread the love

ಗೋಂಡಾ: ಅಯೋಧ್ಯೆಯ ರಾಮ ಮಂದಿರದಲ್ಲಿ ದೇಣಿಗೆಗಳ ದುರುಪಯೋಗ ಹಾಗೂ ಅಕ್ರಮ ನಡೆದಿರುವ ಕುರಿತು ತನಗೆ ಮಾಹಿತಿ ಇದೆ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬುಧವಾರ ಹೇಳಿದ್ದಾರೆ.
ಆದರೆ, ಸದ್ಯಕ್ಕೆ ಆ ಕುರಿತು ಬಹಿರಂಗವಾಗಿ ಮಾತನಾಡುವ ಸ್ಥಿತಿಯಲ್ಲಿ ತಾನು ಇಲ್ಲ ಎಂದು ತಿಳಿಸಿದ್ದಾರೆ.
ವಿಷ್ಟೋಹರಪುರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಗ್, ತಮಗೆ ತಿಳಿದಿರುವ ಸಂಗತಿಗಳನ್ನು ಈಗ ಬಹಿರಂಗಪಡಿಸಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗಬಹುದು ಎಂದು ಹೇಳಿದರು.’ನಾನು ತುಂಬಾ ದುರ್ಬಲ ವ್ಯಕ್ತಿ. ನಾನು ಸತ್ಯ ಹೇಳಿದರೆ ತೊಂದರೆಗೆ ಸಿಲುಕುತ್ತೇನೆ. ಏಕೆಂದರೆ ಅವರು ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳು. ಈಗ ಸತ್ಯ ಹೇಳುವ ಧೈರ್ಯ ನನಗಿಲ್ಲ. ಸೂಕ್ತ ಸಮಯ ಬಂದಾಗ ಮಾತನಾಡುತ್ತೇನೆ’ ಎಂದು ಹೇಳಿದರು.
ಆದರೆ, ಅವರು ಉಲ್ಲೇಖಿಸಿದ ವ್ಯಕ್ತಿಗಳು ಯಾರು ಎಂಬುದನ್ನು ಬಹಿರಂಗಪಡಿಸಲಿಲ್ಲ. ಅಯೋಧ್ಯೆಯ ರಾಮ ಮಂದಿರಕ್ಕೆ ಬಂದ ದೇಣಿಗೆಗಳ ದುರುಪಯೋಗದ ಆರೋಪಗಳ ಕುರಿತು ವಿವಾದ ನಡೆಯುತ್ತಿರುವ ನಡುವೆಯೇ ಅವರ ಈ ಹೇಳಿಕೆಗಳು ಮಹತ್ವ ಪಡೆದಿವೆ.
ಇತ್ತೀಚೆಗೆ ದಿಲ್ಲಿಯಲ್ಲಿ 10 ದಿನಗಳ ವಾಸ್ತವ್ಯದ ಬಳಿಕ ತಮ್ಮ ಗ್ರಾಮಕ್ಕೆ ಮರಳಿರುವ ಸಿಂಗ್, ಕಳೆದ ಕೆಲವು ವರ್ಷಗಳಿಂದ ಹಲವು ಸವಾಲುಗಳನ್ನು ಎದುರಿಸುತ್ತಿರುವುದಾಗಿ ಹೇಳಿದರು.2023ರಲ್ಲಿ ಮಹಿಳಾ ಕುಸ್ತಿಪಟುಗಳು ತಮ್ಮವಿರುದ್ಧ ಮಾಡಿದ್ದ ಆರೋಪಗಳನ್ನು ಉಲ್ಲೇಖಿಸಿದ ಅವರು, ಆ ವಿವಾದದ ಪರಿಣಾಮಗಳನ್ನು ತಾವು ದೀರ್ಘಕಾಲದಿಂದ ಅನುಭವಿಸುತ್ತಿರುವುದಾಗಿ ಹೇಳಿದರು.
NEET ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳು ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ಪ್ರತಿಕ್ರಿಯಿಸಿದ ಸಿಂಗ್, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರನ್ನು ಸಮರ್ಥಿಸಿಕೊಂಡರು. ಸಚಿವರ ರಾಜೀನಾಮೆಯಿಂದ ಸಮಸ್ಯೆಗೆ ಪರಿಹಾರ ದೊರೆಯುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಪ್ರಶ್ನೆ ಪತ್ರಿಕೆ ಸೋರಿಕೆಯು ವಿವಿಧ ಹಂತಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಒಳಗೊಂಡಿರುವ ಸಂಘಟಿತ ಜಾಲದ ಪರಿಣಾಮವಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಾಗ ಮಾತ್ರ ಇಂತಹ ಅಕ್ರಮಗಳನ್ನು ನಿಯಂತ್ರಿಸಲು ಸಾಧ್ಯ ಎಂದು ಅವರು ಹೇಳಿದರು.


Spread the love
Share:

administrator

Leave a Reply

Your email address will not be published. Required fields are marked *