Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಾಗಲಕೋಟೆ: ಬಸ್‌ಗೆ ಡಿಕ್ಕಿಯಾದ ಬೈಕ್; ಬೆಂಕಿಗಾಹುತಿಯಾದ 20 ವರ್ಷದ ಯುವಕ!

Spread the love

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಸೊರಗಾಂವ್ ಗ್ರಾಮದ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ 20 ವರ್ಷದ ಯುವಕನೊಬ್ಬ ಸಜೀವ ದಹನಗೊಂಡ ಘಟನೆ ನಡೆದಿದೆ.

ಬಸ್‌ಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್‌ಗೆ ಬೆಂಕಿ ತಗುಲಿ ಯುವಕ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾನೆ. ಮೃತನನ್ನು ಮುಧೋಳ ಪಟ್ಟಣದ ಜನತಾ ಪ್ಲಾಟ್ ನಿವಾಸಿ ನವೀನ್ ಹನುಮಂತ ಗೋರ್ಕ್ ಎಂದು ಗುರುತಿಸಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಬಾದಾಮಿಯಿಂದ ಇಚಲಕರಂಜಿ ಕಡೆಗೆ ತೆರಳುತ್ತಿದ್ದ ಬಸ್‌ಗೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಸವಾರ ನವೀನ್ ಬೆಂಕಿಯಲ್ಲಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆ ಬಳಿಕ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

ಇದೇ ವೇಳೆ, ಭಾನುವಾರ ಮಧ್ಯಾಹ್ನ ಸುಮಾರು 1.30ರ ವೇಳೆಗೆ ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದ ಬಳಿ ಸಣ್ಣ ಪ್ರಮಾಣದ ಅಗ್ನಿ ಅವಘಡವೂ ಸಂಭವಿಸಿದೆ.

ನಮ್ಮ ಮೆಟ್ರೋದ ಹಸಿರು ಮಾರ್ಗದ ನಾಗಸಂದ್ರ ನಿಲ್ದಾಣದ ಒಂದು ಭಾಗದಲ್ಲಿ ಅಳವಡಿಸಿದ್ದ ಸೈನ್‌ಬೋರ್ಡ್‌ಗೆ ಬೆಂಕಿ ತಗುಲಿದ್ದರಿಂದ ದಟ್ಟ ಹೊಗೆ ಕಾಣಿಸಿಕೊಂಡು ಪ್ರಯಾಣಿಕರು ಹಾಗೂ ಸುತ್ತಮುತ್ತಲಿನ ನಿವಾಸಿಗಳಲ್ಲಿ ಆತಂಕ ಮೂಡಿಸಿತ್ತು.

ಘಟನೆಗೆ ತಕ್ಷಣ ಸ್ಪಂದಿಸಿದ ಬಿಎಂಆರ್‌ಸಿಎಲ್ ಅಧಿಕಾರಿಗಳು, ಅಗ್ನಿಶಾಮಕ ತಂಡಗಳು ಬೆಂಕಿಯನ್ನು ನಂದಿಸಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣಕ್ಕೆ ತಂದಿತು. ಈ ಅಗ್ನಿ ಅವಘಡದಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಹಾಗೂ ಮೆಟ್ರೋ ಸಂಚಾರಕ್ಕೂ ವ್ಯತ್ಯಯವಾಗಿಲ್ಲ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ.


Spread the love
Share:

administrator

Leave a Reply

Your email address will not be published. Required fields are marked *