ಬಜ್ಪೆ: ಬಸ್ ಹಾಗೂ ಬೈಕ್ ಮುಖಾಮುಖಿ ಢಿಕ್ಕಿ; ಸವಾರ ಸ್ಥಳದಲ್ಲೇ ಸಾ*ವು, ಪತ್ನಿ ಗಂಭೀರ!

ಬಜ್ಪೆ : ಖಾಸಗಿ ಸರ್ವಿಸ್ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಕಾರು ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ.

ಬಜ್ಪೆ ನಿವಾಸಿ ಬಶೀರ್ ಕಿನ್ನಿಗೋಳಿ (45) ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಗಾಯಗೊಂಡಿರುವ ಅವರ ಪತ್ನಿಯನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಶೀರ್ ಹಾಗೂ ಅವರ ಪತ್ನಿ ಮುಲ್ಕಿಯ ಕೊಲ್ನಾಡು ಎಂಬಲ್ಲಿ ಆಯೋಜಿಸಲಾಗಿದ್ದ ಖಾಸಗಿ ಸಮಾರಂಭವೊಂದರಲ್ಲಿ ಭಾಗವಹಿಸಿ ದ್ವಿಚಕ್ರ ವಾಹನದಲ್ಲಿ ಬಜ್ಪೆಯತ್ತ ಹಿಂದಿರುಗುತ್ತಿದ್ದರು. ಈ ವೇಳೆ ಎಕ್ಕಾರು ಬಳಿ ವಿರುದ್ಧ ದಿಕ್ಕಿನಿಂದ ಬಂದ ಖಾಸಗಿ ಸರ್ವಿಸ್ ಬಸ್ ಹಾಗೂ ಇವರ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬಶೀರ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.