Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಂಟ್ವಾಳ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ 53 ವರ್ಷದ ವ್ಯಕ್ತಿ ಪೋಕ್ಸೋ ಕಾಯ್ದೆಯಡಿ ಬಂಧನ!

Spread the love

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದಡಿ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್ (53) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.ಆ.15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಹೋಗುವ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕನ ಪಕ್ಕದಲ್ಲಿ ಅಪರಿಚಿತ ವ್ಯಕ್ತಿ ಕುಳಿತುಕೊಂಡಿದ್ದು, ಪ್ರಯಾಣದ ವೇಳೆ ಬಾಲಕನೊಂದಿಗೆ ಅನುಚಿತವಾಗಿ ವರ್ತಿಸಿ ಬಳಿಕ ಬಾಲಕ ಮನೆಗೆ ತೆರಳಿದ ಸಂದರ್ಭ ಅಲ್ಲಿಗೂ ತೆರಳಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 179/2026ರಂತೆ ಪೋಕ್ಸೋ ಕಾಯ್ದೆ 2012ರ ಕಲಂ 4(2) ಹಾಗೂ ಬಿಎನ್‌ಎಸ್‌ 2023ರ ಕಲಂ 351(2)ರಡಿ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆ ನಡೆಸಿದ ವಿಟ್ಲ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.


Spread the love
Share:

administrator

Leave a Reply

Your email address will not be published. Required fields are marked *