ಬಂಟ್ವಾಳ: ಬಸ್ ನಿಲ್ದಾಣದಲ್ಲಿ ಯುವತಿಯ ಬರ್ಬರ ಹ*ತ್ಯೆ; ಆರೋಪಿ ಚೇತನ್ ಬಂಟ್ವಾಳ ಪೊಲೀಸರ ವಶಕ್ಕೆ!

ಬಂಟ್ವಾಳ: ಬಿ.ಸಿ. ರೋಡ್‌ನ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಕಕ್ಯಪದವು ನಿವಾಸಿ ಲಾವಣ್ಯ ಎಂಬಾಕೆಯನ್ನು ತಲವಾರ್ ನಿಂದ ಬರ್ಬರವಾಗಿ ಕೊಲೆಗೈದು ತಲೆಮರೆಸಿಕೊಂಡಿದ್ದ ಆಕೆಯ ಸಂಬಂಧಿ, ಹಂತಕ ಚೇತನ್‌ನನ್ನುಪೊಲೀಸರು ಬಂಧಿಸಿದ್ದಾರೆ.

ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದ ಬಂಟ್ವಾಳ ಪೊಲೀಸರು ಸಿಸಿಬಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಶುಕ್ರವಾರ ಬೆಳಗ್ಗೆ ಮಂಗಳೂರು ಹೊರವಲಯದ ಪಚ್ಚನಾಡಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಈ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿಯನ್ನು ಇನ್ನಷ್ಟೇ ನೀಡಬೇಕಿದೆ.
ಕೊಲೆ ನಡೆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ್ದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ಅವರು ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದರು. ಖಚಿತ ಮಾಹಿತಿಯ ಮೇರೆಗೆ ದಾಳಿ ಮಾಡಿ ಬಂಟ್ವಾಳ ಮತ್ತು ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿ ಚೇತನ್ ಮೃತ ಲಾವಣ್ಯಳನ್ನು ಏಕಮುಖವಾಗಿ ಪ್ರೀತಿಸುತ್ತಿದ್ದು, ಆಕೆ ಆತನ ಪ್ರಸ್ತಾಪವನ್ನು ತಿರಸ್ಕರಿಸಿದ್ದಳು. ಇದೇ ಕೋಪದಲ್ಲಿ ಹೊಂಚುಹಾಕಿ ಬಸ್ ನಿಲ್ದಾಣದಲ್ಲೇ ಬರ್ಬರ ಹತ್ಯೆ ನಡೆಸಿದ್ದನು.
ಆರೋಪಿ ಬಂಧನದ ಕುರಿತಂತೆ ಪೊಲೀಸ್ ಇಲಾಖೆಯಿಂದ ಅಧಿಕೃತ ಮಾಹಿತಿಯನ್ನು ಇನ್ನಷ್ಟೇ ಬರಬೇಕಿದೆ.